28ರಂದು ಎಸ್.ಜಾನಕಿ ಅವರಿಂದ ಸಂಗೀತ ಸಂಜೆ

ಮಂಗಳವಾರ, ಜೂನ್ 25, 2019
25 °C

28ರಂದು ಎಸ್.ಜಾನಕಿ ಅವರಿಂದ ಸಂಗೀತ ಸಂಜೆ

Published:
Updated:
28ರಂದು ಎಸ್.ಜಾನಕಿ ಅವರಿಂದ ಸಂಗೀತ ಸಂಜೆ

ಮೈಸೂರು: ಎಸ್.ಜಾನಕಿ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಅ.28ರಂದು ಸಂಜೆ 6 ಗಂಟೆಗೆ ಇಲ್ಲಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಗಾಯಕಿ ಎಸ್.ಜಾನಕಿ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಟ್ರಸ್ಟ್ ಅಧ್ಯಕ್ಷ ನವೀನ್, ‘ಇದು ಎಸ್.ಜಾನಕಿ ಅವರು ನೀಡುತ್ತಿರುವ ಕೊನೆಯ ಕಾರ್ಯಕ್ರಮ. ಆರು ತಿಂಗಳ ಹಿಂದೆಯೇ ಅವರು ಸಾರ್ವಜನಿಕ ಕಾರ್ಯಕ್ರಮ ನೀಡುವುದಿಲ್ಲ ಎಂದು ಹೇಳಿದ್ದರು.  ಸತತವಾಗಿ ಅವರಲ್ಲಿ ಮನವಿ ಮಾಡಿದ ಫಲವಾಗಿ ಕಾರ್ಯಕ್ರಮ ನೀಡಲು ಒಪ್ಪಿದ್ದು, ಇನ್ನು ಮುಂದೆ ಕಾರ್ಯಕ್ರಮ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಲನಚಿತ್ರರಂಗದ ಗಣ್ಯರಾದ ಶಿವರಾಜ್‌ಕುಮಾರ್, ಬಿ.ಸರೋಜಾದೇವಿ, ಶೈಲಶ್ರೀ, ಸಾಹುಕಾರ್ ಜಾನಕಿ, ಭಾರತಿ ವಿಷ್ಣುವರ್ಧನ್, ಹಂಸಲೇಖ, ಶ್ರೀನಾಥ್, ರಾಜೇಶ್, ಜಯಂತಿ ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎಸ್.ಜಾನಕಿ ಅವರ ಪುತ್ರ ಮುರಳಿಕೃಷ್ಣ, ‘ಈಗಾಗಲೇ ಅಮ್ಮ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಡುವುದಕ್ಕೆ ನಿವೃತ್ತಿ ಘೋಷಿಸಿರುವುದು ನಿಜ. ನಿವೃತ್ತಿ ಘೋಷಣೆಗೂ ಮುಂಚೆಯೇ ಒಪ್ಪಿದ್ದ ಅಥವಾ ಮಾತು ಕೊಟ್ಟಿದ್ದ ಕಾರ್ಯಕ್ರಮಗಳನ್ನಷ್ಟೇ ಈಗ ನೀಡುತ್ತಿದ್ದಾರೆ. ಹೊಸ ಕಾರ್ಯಕ್ರಮಗಳನ್ನು ಅವರು ಒಪ್ಪುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry