‘ಎಸ್‌.ಸಿ., ಎಸ್‌.ಟಿ, ಅಲ್ಪಸಂಖ್ಯಾತರಿಗೆ ಉದ್ಯೋಗ ಖಾತ್ರಿ’

ಮಂಗಳವಾರ, ಜೂನ್ 25, 2019
28 °C

‘ಎಸ್‌.ಸಿ., ಎಸ್‌.ಟಿ, ಅಲ್ಪಸಂಖ್ಯಾತರಿಗೆ ಉದ್ಯೋಗ ಖಾತ್ರಿ’

Published:
Updated:

ರೋಣ: ‘ಎಸ್‌.ಸಿ., ಎಸ್‌.ಟಿ. ಹಾಗೂ ಅಲ್ಪಸಂಖ್ಯಾತರು ಶಿಕ್ಷಣ ಹಾಗೂ ಇತರೆ ಸೌಲಭ್ಯಗಳಿಂದ ವಂಚಿತಗೊಳ್ಳಬಾರದು. ಮುಖ್ಯವಾಗಿ ಅವರಿಗೆ ಉದ್ಯೋಗದಲ್ಲಿ ಖಾತ್ರಿ ಒದಗಿಸುವಂತಹ ಆಡಳಿತ ವ್ಯವಸ್ಥೆಗೆ ಸನ್ನದ್ಧವಾಗಿದ್ದೇವೆ’ ಎಂದು ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎಸ್.ಸಿ.ಮಹೇಶ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಜರುಗಿದ ‘ಮುನ್ನೋಟ–2025’ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಸಾಮಾಜಿಕ ನ್ಯಾಯದಡಿ ಈ ಪಂಗಡಗಳಿಗಾಗಿ ಜಾರಿಗೆ ತಂದಿರುವ ಸೌಲಭ್ಯಗಳು ದೊರಕಬೇಕು ಎಂಬುದು ರಾಜ್ಯ ಸರ್ಕಾರದ ಇಚ್ಛೆಯಾಗಿದೆ. ಅಲ್ಲದೆ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಬಳಕೆಯಾಗಬೇಕಾದ ಅನುದಾನವನ್ನು ಆ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡುವುದು ಇಲಾಖೆಗಳ ಕರ್ತವ್ಯ. ಇದನ್ನು ಅಧಿಕಾರಿಗಳು ಸೂಕ್ತವಾಗಿ ನಿಭಾಯಿಸಬೇಕು’ ಎಂದರು.

‘ತಾಲ್ಲೂಕಿನ ಪ್ರತಿ ಗ್ರಾಮಗಳಲ್ಲಿರುವ ಎಸ್‌.ಸಿ, ಎಸ್‌.ಟಿ., ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಯುವಕರು ಹಾಗೂ ಯುವತಿಯರು ಪದವಿಯವರೆಗೆ ಶಿಕ್ಷಣ ಪಡೆಯುಂತಹ ವ್ಯವಸ್ಥೆ ಜಾರಿಗೆ ತರಲಾಗಿದೆ. ಜೊತೆಗೆ ಅವರಿಗೆ ಶೈಕ್ಷಣಿಕ ಪ್ರಗತಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ತಾಲ್ಲೂಕು ಆಡಳಿತ ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ಗ್ರಾಮದಲ್ಲಿ ಎಸ್ಎಸ್ಎಲ್‌ಸಿವರೆಗೆ ಶಿಕ್ಷಣ ಪಡೆದಿರುವವರನ್ನು ಗುರುತಿಸಿ ಅವರಿಗೆ ಹೆಚ್ಚಿನ ಶಿಕ್ಷಣ ಒದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದು ವಿವರಿಸಿದರು.

‘ಈ ಜನಾಂಗಗಳ ಅಭಿವೃದ್ಧಿಗೆ ಯಾವ ರೀತಿಯ ಯೋಜನೆಗಳನ್ನು ಜಾರಿಗೆ ತರಬೇಕು ಮತ್ತು ಗುಡಿ ಕೈಗಾರಿಕೆಗಳನ್ನು ಹೇಗೆ ಉತ್ತೇಜಿಸಬೇಕು ಎಂಬ ಮಾಹಿತಿಯನ್ನು ಜನಪ್ರತಿನಿಧಿಗಳು ನೀಡಬೇಕು. ಅಲ್ಲದೆ ತಾಲ್ಲೂಕಿನಲ್ಲಿ ಪ್ರವಾಸಿ ತಾಣಗಳನ್ನು ಗುರುತಿಸುವ ಬಗ್ಗೆಯೂ ಜನಾಭಿಪ್ರಾಯ ಸಂಗ್ರಹವಾಗಲಿದೆ. ಸಾರ್ವಜನಿಕರು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ರೂಪಾ ಅಂಗಡಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಮಂಜುಳಾ ಹುಲ್ಲಣ್ಣವರ, ಮಲ್ಲವ್ವ ಬಿಚ್ಚೂರ, ಪಡಿಯಪ್ಪ ಪೂಜಾರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪ್ರೇಮವ್ವ ನಾಯಕ, ಉಪಾಧ್ಯಕ್ಷೆ ಇಂದಿರಾ ತೇಲಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮೊಹಮದ್‌ ತರಪದಾರ, ತಹಶೀಲ್ದಾರ್‌ ಶಿವಲಿಂಗಫ್ರಭು ವಾಲಿ, ಇಒ ಎಂ.ವಿ. ಚಳಗೇರಿ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಪ್ರಭು ಮೇಟಿ, ಸಿದ್ದು ಯಾಳಗಿ, ಶಶಿಧರ ಹೂಗಾರ, ತಾಲ್ಲೂಕು ಪಂಚಾಯ್ತಿ ವ್ಯವಸ್ಥಾಪಕ ಪಿ.ಎಚ್.ಗೋದಿಗನೂರ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry