ಬಸ್‌ ನಿಲ್ದಾಣ ಕಾಮಗಾರಿ ಶೀಘ್ರ ಆರಂಭಿಸಿ

ಗುರುವಾರ , ಮೇ 23, 2019
28 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಬಸ್‌ ನಿಲ್ದಾಣ ಕಾಮಗಾರಿ ಶೀಘ್ರ ಆರಂಭಿಸಿ

Published:
Updated:
ಬಸ್‌ ನಿಲ್ದಾಣ ಕಾಮಗಾರಿ ಶೀಘ್ರ ಆರಂಭಿಸಿ

ದೇವದುರ್ಗ: ನನೆಗುದಿಗೆ ಬಿದ್ದಿರುವ ಪಟ್ಟಣದ ಕೇಂದ್ರ ಬಸ್‌ ನಿಲ್ದಾಣದ ಕಾಮಗಾರಿಯನ್ನು ತುರ್ತಾಗಿ ಆರಂಭಿಸಬೇಕು ಎಂದು ಸಾರಿಗೆ ಸಚಿವ ಎಚ್‌. ಎಂ.ರೇವಣ್ಣ ಗುತ್ತಿಗೆದಾರರಿಗೆ ತಾಕೀತು ಮಾಡಿದರು. ಪಟ್ಟಣಕ್ಕೆ ಭಾನುವಾರ ಭೇಟಿ ನೀಡಿದ್ದ ಅವರು ಬಸ್‌ ನಿಲ್ದಾಣ ಕಾಮಾರಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಈ ಹಿಂದೆ ಇದ್ದ ಬಸ್‌ ನಿಲ್ದಾಣವನ್ನು ಸಂಪೂರ್ಣವಾಗಿ ಒಡೆಯಲಾಗಿದೆ. ಇದುವರೆಗೂ ಕಾಮಗಾರಿ ಆರಂಭಿಸದೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ ಎಂದರು.

ನಾಲ್ಕು ವಿಭಾಗೀಯ ಸಂಸ್ಥೆಗಳ ಮೂಲಕ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಅಂತರ ಸಂಸ್ಥೆ ವರ್ಗಾವಣೆಗೆ ಸಚಿವ ಸಂಪುಟ ಅನುಕೂಲ ಮಾಡಿಕೊಟ್ಟಿರುವುದರಿಂದ ಸುಮಾರು 18 ಸಾವಿರ ವರ್ಗಾವಣೆಗಾಗಿ ಅರ್ಜಿಗಳು ಬಂದಿವೆ. ಇದುವರಿಗೂ 24,900 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಪಾಟೀಲ ಇಟಿಗಿ, ಕಾಂಗ್ರೆಸ್‌ ಜಿಲ್ಲಾ ಪ್ರಭಾರ ಅಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ರಾಜಶೇಖರ ನಾಯಕ, ಇಕ್ಬಾಲ್‌ಸಾಬ ಹೌದೊಡ್ಡಿ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry