ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀಗಳ ಜೊತೆ ಚರ್ಚೆಗೆ ಸಿದ್ಧ; ಜಾಮದಾರ

Last Updated 23 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಕುರಿತಂತೆ ಪೇಜಾವರ ಶ್ರೀಗಳ ಜೊತೆ 2018ರ ಜನವರಿ ಕೊನೆ ವಾರದಲ್ಲಿ ಚರ್ಚಿಸಲಾಗುವುದು’ ಎಂದು ಲಿಂಗಾಯತ ಧರ್ಮ ವೇದಿಕೆಯ ಕಾರ್ಯದರ್ಶಿ ಎಸ್.ಎಂ.ಜಾಮದಾರ ತಿಳಿಸಿದ್ದಾರೆ.

ಈ ಕುರಿತಂತೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಶ್ರೀಗಳೇ ಸೂಚಿಸಿದ ಸೂಕ್ತ ಸ್ಥಳದಲ್ಲಿ ನಾವು ಅವರೊಂದಿಗೆ ಚರ್ಚಿಸಲು ಒಪ್ಪಿಕೊಂಡಿದ್ದೇವೆ. ನಮ್ಮ ತಂಡದವರು ಆ ಚರ್ಚೆಯಲ್ಲಿ ಭಾಗವಹಿಸಿ ಶ್ರೀಗಳು ಕೇಳುವ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲಿದ್ದಾರೆ’ ಎಂದಿದ್ದಾರೆ.

ಲಿಂಗಾಯತ ಸ್ವತಂತ್ರಧ ಧರ್ಮದ ಮಾನ್ಯತೆ ವಿಷಯಕ್ಕೆ ಸಂಬಂಧಿಸಿದಂತೆ ಪೇಜಾವರ ಶ್ರೀಗಳು ಇತ್ತೀಚೆಗಷ್ಟೇ ಹೇಳಿಕೆ ನೀಡಿ, ‘ವೀರಶೈವ, ಲಿಂಗಾಯತರು ಒಂದಾದರೆ ಮಾತ್ರ ಸಮಾಜಕ್ಕೆ ಬಲ ಬರುತ್ತದೆ’ ಎಂದಿದ್ದರು.

ಇದಕ್ಕೆ ಲಿಂಗಾಯತ ಬಣದ ಮುಖಂಡರು ಮತ್ತು ಸ್ವಾಮೀಜಿಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ‘ಶ್ರೀಗಳು ಲಿಂಗಾಯತರ ವಿಷಯದಲ್ಲಿ ಮೂಗು ತೂರಿಸಬಾರದು’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT