ಶಿಕ್ಷಕರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ

ಬುಧವಾರ, ಜೂನ್ 19, 2019
31 °C

ಶಿಕ್ಷಕರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ

Published:
Updated:

ತಿರುವನಂತಪುರ: ಶಿಕ್ಷಕರ ಕಿರುಕುಳದಿಂದ ನೊಂದು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಗೌರಿ ಎಂಬ ವಿದ್ಯಾರ್ಥಿನಿ, ಚಿಕಿತ್ಸೆ ಫಲಕಾರಿಯಾಗದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾಳೆ.

ಕೊಲ್ಲಂನ ಟ್ರಿನಿಟಿ ಲೈಸಿಎಂ ಶಾಲೆಯ 10ನೇ ತರಗತಿ ಓದುತ್ತಿದ್ದ ಗೌರಿ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದಳು.

ಇದೇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಗೌರಿಯ ಸಹೋದರಿ ತರಗತಿ ನಡೆಯುವ ವೇಳೆ ಸಹಪಾಠಿಗಳೊಂದಿಗೆ ಮಾತನಾಡಿದ್ದಕ್ಕೆ, ಶಿಕ್ಷಕರೊಬ್ಬರು ಆಕೆಯನ್ನು ಬಾಲಕರೊಂದಿಗೆ ಕೂರಿಸಿ ಶಿಸ್ತಿನ ಕ್ರಮ ಜರುಗಿಸಿದ್ದರು. ಇದರಿಂದಾಗಿ ಕೆಲವು ಸಹಪಾಠಿಗಳು ಆಕೆಯನ್ನು ಗೇಲಿ ಮಾಡಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry