ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 109.51 ಕೋಟಿ ಟಿಡಿಎಸ್‌ ವಂಚನೆ

Last Updated 23 ಅಕ್ಟೋಬರ್ 2017, 19:26 IST
ಅಕ್ಷರ ಗಾತ್ರ

ಬೆಂಗಳೂರು: ಅನೇಕ ಕಂಪೆನಿಗಳು ₹109.51 ಕೋಟಿ ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಮೊತ್ತವನ್ನು ಸರ್ಕಾರದ ಖಾತೆಗೆ ಜಮೆ ಮಾಡದೆ ವಂಚಿಸಿರುವುದು ಆದಾಯ ತೆರಿಗೆ(ಐ.ಟಿ) ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ  ಪತ್ತೆಯಾಗಿದೆ.

ಕರ್ನಾಟಕ ಮತ್ತು ಗೋವಾ ವಲಯದ (ಐ.ಟಿ) ಇಲಾಖೆ ತನ್ನ ವ್ಯಾಪ್ತಿಯಲ್ಲಿ 161 ವಿಶೇಷ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಯಲ್ಲಿ ಸರ್ಕಾರಕ್ಕೆ ಪಾವತಿಸಬೇಕಾದ ಟಿಡಿಎಸ್ ಮೊತ್ತವನ್ನು ಸೂಕ್ತ ಸಮಯದಲ್ಲಿ ನೀಡದಿರುವ ಮತ್ತು ಸಮಯಕ್ಕೆ ಸರಿಯಾಗಿ ನೌಕರರಿಂದ ಟಿಡಿಎಸ್ ಹಣ ಕಡಿತಗೊಳಿಸದಿರುವ ಹಲವು ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಐಟಿ ಇಲಾಖೆ ನಿರ್ಧರಿಸಿದೆ.

ಬೆಂಗಳೂರಿನ ಕಂಪೆನಿಯೊಂದು ಟಿಡಿಎಸ್ ಮೊತ್ತವನ್ನು ಸರ್ಕಾರಕ್ಕೆ ನೀಡದೆ ವಂಚಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯ, ಆದಾಯ ತೆರಿಗೆ ಇಲಾಖೆ ಕಾಯ್ದೆ– 1961ರ ಪ್ರಕಾರ ಆ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 5,000 ದಂಡ ವಿಧಿಸಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT