ಪ್ರಜಾ ಪರಿವರ್ತನ ಪಕ್ಷದ ನೋಂದಣಿಗೆ ಅರ್ಜಿ

ಸೋಮವಾರ, ಜೂನ್ 17, 2019
31 °C

ಪ್ರಜಾ ಪರಿವರ್ತನ ಪಕ್ಷದ ನೋಂದಣಿಗೆ ಅರ್ಜಿ

Published:
Updated:

ನವದೆಹಲಿ: ಶೋಷಣೆ ರಹಿತ ಸಮಾಜ ಮತ್ತು ಪ್ರಬುದ್ಧ ದೇಶ ನಿರ್ಮಾಣದ ಸಂಕಲ್ಪದೊಂದಿಗೆ ಇತ್ತೀಚೆಗೆ ಉದಯವಾಗಿರುವ ಪ್ರಜಾ ಪರಿವರ್ತನ ಪಕ್ಷದ ನೋಂದಣಿಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಪಕ್ಷದ ಅಧ್ಯಕ್ಷ ಬಿ.ಗೋಪಾಲ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣೆಯನ್ನು ಉದ್ದೇಶದಲ್ಲಿ ಇಟ್ಟುಕೊಂಡು ಪಕ್ಷ ಸ್ಥಾಪಿಸಲಾಗಿದೆ. ಎರಡು ತಿಂಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ರಾಜ್ಯದ ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಕಲ್ಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.

ಮತವನ್ನು ಮಾರಿಕೊಂಡವರು ತಮ್ಮನ್ನು ಪ್ರತಿನಿಧಿಸುವವರಿಂದ ಅಭಿವೃದ್ಧಿಯನ್ನು ನಿರೀಕ್ಷಿಸಲಾಗದು. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಮೊದಲು ಮತದಾರರ ಮನಸ್ಸನ್ನು ಪರಿವರ್ತಿಸಬೇಕಿದೆ. ನಂತರವಷ್ಟೇ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದ ಅವರು, ಕಳೆದ ನಾಲ್ಕು ವರ್ಷಗಳಿಂದ ಪ್ರಜಾ ಪರಿವರ್ತನ ವೇದಿಕೆಯ ಹೆಸರಿನಲ್ಲಿ ರಾಜ್ಯದಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಖಜಾಂಚಿ ಸೈಯ್ಯದ್‌ ರೋಷನ್‌ ಮುಲ್ಲಾ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry