ಡಾಲರ್ಸ್‌ ಕಾಲೊನಿ:ಯೋಜನಾ ವರದಿಗೆ ಸೂಚನೆ

ಮಂಗಳವಾರ, ಜೂನ್ 25, 2019
29 °C

ಡಾಲರ್ಸ್‌ ಕಾಲೊನಿ:ಯೋಜನಾ ವರದಿಗೆ ಸೂಚನೆ

Published:
Updated:

ಬೆಂಗಳೂರು: ಜೆ.ಪಿ.ನಗರ ಡಾಲರ್ಸ್‌ ಕಾಲೊನಿಯಲ್ಲಿರುವ ರಾಜಕಾಲುವೆ ಮತ್ತು ಚರಂಡಿಗಳನ್ನು ಅಭಿವೃದ್ಧಿಪಡಿಸಲು ₹10 ಕೋಟಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸುವಂತೆ ಎಂಜಿನಿಯರ್‌ಗಳಿಗೆ ಮೇಯರ್‌ ಆರ್.ಸಂಪತ್ ರಾಜ್ ಸೂಚಿಸಿದರು. ಈ ಪ್ರದೇಶದಲ್ಲಿ ಸೋಮವಾರ ‍ಪರಿಶೀಲನೆ ನಡೆಸಿದರು.

ಈ ವೇಳೆ, ಬಡಾವಣೆಯಲ್ಲಿರುವ ಸಮಸ್ಯೆಗಳ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದವರು ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್‌, ‘ಒಂದು ವಾರದಲ್ಲಿ ಯೋಜನಾ ವರದಿ‌ ಸಿದ್ಧಪಡಿಸಲು ಸೂಚಿಸಿದ್ದೇನೆ. ಇದಕ್ಕೆ ಅನುಮೋದನೆ ಸಿಕ್ಕ ಬಳಿಕ ಕಾಮಗಾರಿ ಆರಂಭಿಸುತ್ತೇವೆ’ ಎಂದರು.

‘ರಾಜಕಾಲುವೆಗೆ ಚರಂಡಿ ನೀರು ಸೇರುತ್ತಿದೆ. ಪರ್ಯಾಯ ಮಾರ್ಗದಲ್ಲಿ ನೀರು ಹರಿಸುವಂತೆ ಜಲಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ದಾಲ್ಮಿಯಾ ಜಂಕ್ಷನ್ ಬಳಿಯ ಮೇಲುಸೇತುವೆ ಕಾಮಗಾರಿ ಪರಿಶೀಲಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry