‘ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚಳ’

ಮಂಗಳವಾರ, ಜೂನ್ 25, 2019
22 °C

‘ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚಳ’

Published:
Updated:

ಬೆಂಗಳೂರು: ‘ರಾಜ್ಯದಲ್ಲಿ 2016ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ 1,912 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ’ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ರಾಜ್ಯ ಘಟಕದ ಸಂಚಾಲಕಿ ಯಶೋದಾ ಪಿ. ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತರ ಮೇಲೆ ಪ್ರತಿನಿತ್ಯ ಆರು ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಪ್ರತಿ 5 ದಿನಕ್ಕೆ ಒಬ್ಬರ ಕೊಲೆ ಹಾಗೂ ಮಹಿಳೆಯ ಅತ್ಯಾಚಾರ ನಡೆಯುತ್ತಿವೆ. ವರ್ಷದಲ್ಲಿ 164 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ’ ಎಂದರು.

‘ಈ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 78 ಮಂದಿ ಕೊಲೆಯಾಗಿದ್ದಾರೆ. 1526 ಪ್ರಕರಣಗಳು ಪರಿಶಿಷ್ಟ ಜಾತಿಯವರ ಮೇಲೆ ಹಾಗೂ 386 ಪ್ರಕರಣಗಳು ಪರಿಶಿಷ್ಟ ಪಂಗಡದವರ ಮೇಲೆ ನಡೆದಿವೆ’ ಎಂದು ತಿಳಿಸಿದರು.

‘ನ್ಯಾಯಾಲಯಗಳಲ್ಲಿ ದಾಖಲಾದ ಒಟ್ಟು 1096 ಪ್ರಕರಣಗಳಲ್ಲಿ 53ಕ್ಕೆ ಶಿಕ್ಷೆಯಾಗಿದೆ. 955 ಪ್ರಕರಣಗಳು ಖುಲಾಸೆಗೊಂಡರೆ, 88 ಪ್ರಕರಣಗಳು ವಿವಿಧ ಕಾರಣಗಳಿಂದಾಗಿ ವಿಲೇವಾರಿಗೊಂಡಿವೆ. ವರದಿಯಾದ ದೌರ್ಜನ್ಯ ಪ್ರಕರಣಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗದೆ ಉಳಿದಿವೆ’ ಎಂದು ಮಾಹಿತಿ ನೀಡಿದರು.

‘ಈ ಪ್ರಕರಣಗಳ ಇತ್ಯರ್ಥಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಸಮರ್ಥ ನ್ಯಾಯಾಧೀಶರನ್ನು ನೇಮಕ ಮಾಡಬೇಕು. ಅಸ್ಪೃಶ್ಯತೆಯ ಆಚರಣೆ ಕುರಿತು ಸಮೀಕ್ಷೆ ನಡೆಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ರಾಜಿಗೆ ಅವಕಾಶ ನೀಡದೆ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು’ ಎಂದು ಅವರು ಒತ್ತಾಯಿಸಿದರು.

25ಕ್ಕೆ ವರದಿ ಬಿಡುಗಡೆ: ಸಮಿತಿ ಹಾಗೂ ಕರ್ನಾಟಕ ದಲಿತ ಮಹಿಳಾ ವೇದಿಕೆಯು ಇದೇ 25ರಂದು ಸೆಂಟ್ರಲ್ ಕಾಲೇಜಿನ ಸೆನೆಟ್‌ ಸಭಾಂಗಣದಲ್ಲಿ 2016ನೇ ಸಾಲಿನ ವರದಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದೆ ಎಂದು ತಿಳಿಸಿದರು.

ದೌರ್ಜನ್ಯದಲ್ಲಿ ಬೆಂಗಳೂರು ಪ್ರಥಮ

ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 199 ಪ್ರಕರಣಗಳು ನಡೆದಿರುವುದನ್ನು ವರದಿ ಬಹಿರಂಗಪಡಿಸಿದೆ. 5 ವರ್ಷಗಳಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚು ದೌರ್ಜನ್ಯದ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಆದರೆ, ಅದರಲ್ಲಿ ಶೇ 81.40 ಪ್ರಕರಣಗಳು ಇತ್ಯರ್ಥವಾಗದೆ ಉಳಿದಿವೆ.

ದಲಿತ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಶಿವಮೊಗ್ಗ ಜಿಲ್ಲೆ ಅಗ್ರಸ್ಥಾನದಲ್ಲಿದ್ದು, 16 ಪ್ರಕರಣಗಳು ದಾಖಲಾಗಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry