ಸೋಮವಾರ, ಸೆಪ್ಟೆಂಬರ್ 16, 2019
29 °C

‘ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ’

Published:
Updated:

ಅಮೀನಗಡ: ‘ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಹಸಿವು ಮುಕ್ತವಾಗಿಸಿದ್ದು. ಜನರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ’ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ರಾಜ್ಯ ಸಮಿತಿ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು

ಪಟ್ಟಣದ ಸಮೀಪದ ಸೂಳೇ ಭಾವಿಯ ಭಾವೈಕ್ಯ ಮಹಾದ್ವಾರದಲ್ಲಿ ಹಮ್ಮಿಕೊಂಡಿದ್ದ ಮನೆ–ಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಾಂಗ್ರೆಸ್ ಪಕ್ಷ ಜಾತಿ ಧರ್ಮದ ಭೇದ ಎಣಿಸದೆ ರೈತರು, ಶೋಷಿತರು, ಯುವಕರು, ಮಹಿಳೆಯರು, ಬಡವರು ಹೀಗೆ ಎಲ್ಲರಿಗೂ ಯೋಜನೆಗಳನ್ನು ತಲುಪುವಂತೆ ಮಾಡಿದೆ. ಸೂಳೇಬಾವಿ ಗ್ರಾಮಕ್ಕೆ ಮಸೀದಿ ಕಟ್ಟಡಕ್ಕೆ ₹ 12 ಲಕ್ಷ , ₹ 50ಲಕ್ಷ ವೆಚ್ಚದಲ್ಲಿ ಎರಡು ಶಾದಿಮಹಲ್, ಮಾದರಿ ಬಸ್ ನಿಲ್ದಾಣವನ್ನು ₹ 75ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ’ ಎಂದರು.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ ಗೌಡರ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಮಹಮ್ಮದ್ ಕಿಡಕಿಮನಿ ಇದ್ದರು.

Post Comments (+)