ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯ ಏರಿಯ ಮೇಲೆ ಕಸದ ರಾಶಿ

Last Updated 24 ಅಕ್ಟೋಬರ್ 2017, 5:24 IST
ಅಕ್ಷರ ಗಾತ್ರ

ಆನೇಕಲ್‌ : ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು ಕೆರೆ ಕುಂಟೆಗಳು ತುಂಬಿ ಕೋಡಿ ಹೋಗಿವೆ. ತಾಲ್ಲೂಕಿನ ಇಗ್ಗಲೂರು ಕೆರೆಯ ಏರಿ ಹಾಗೂ ಕೆರೆಗೆ ಕೈಗಾರಿಕೆಗಳು ಹಾಗೂ ಕೋಳಿ ತ್ಯಾಜ್ಯ, ಕಟ್ಟಡಗಳ ತ್ಯಾಜ್ಯಗಳನ್ನು ಎಸೆಯಲಾಗುತ್ತಿದೆ. ಇದರಿಂದಾಗಿ ಗಬ್ಬು ನಾರುತ್ತಿದ್ದು ಜನರು ಈ ರಸ್ತೆಯಲ್ಲಿ ಸಂಚರಿಸಲು ಪರದಾಡಬೇಕಾಗಿದೆ.

ಆನೇಕಲ್–ಚಂದಾಪುರ ರಸ್ತೆಯು ಪ್ರಮುಖ ಸಂಪರ್ಕ ರಸ್ತೆಯಾಗಿದ್ದು ಪ್ರತಿನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ಮುಖ್ಯ ರಸ್ತೆಯಲ್ಲಿಯೇ ಇಗ್ಗಲೂರು ಕೆರೆಯ ಕಟ್ಟೆಯ ಮೇಲೆ ತ್ಯಾಜ್ಯ ಎಸೆಯುತ್ತಿರುವುದರಿಂದ ನಾಯಿಗಳು ಕೋಳಿ ತ್ಯಾಜ್ಯವನ್ನು ತಿನ್ನಲು ಗುಂಪು ಗುಂಪುಗಳಾಗಿ ಬರುತ್ತವೆ. ಇದರಿಂದ ದ್ವಿಚಕ್ರ ವಾಹನಗಳ ಸವಾರರು ರಸ್ತೆಯಲ್ಲಿ ಬೀಳುವ ಪರಿಸ್ಥಿತಿಯಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕೆರೆಯ ಏರಿಯ ಮೇಲೆ ತ್ಯಾಜ್ಯ ಎಸೆಯುವುದನ್ನು ತಡೆಯುವ ಮೂಲಕ ಕೆರೆಯ ಸಂರಕ್ಷಣೆ ಮಾಡಬೇಕು ಹಾಗೂ ಜನರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT