ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಂತಿ ಆಚರಣೆ ಸೀಮಿತವಾಗಬಾರದು: ಮಲ್ಲಿಕಾರ್ಜುನ ಗೌಡ

Last Updated 24 ಅಕ್ಟೋಬರ್ 2017, 5:32 IST
ಅಕ್ಷರ ಗಾತ್ರ

ಕೂಡ್ಲಿಗಿ: ‘ಕಿತ್ತೂರು ರಾಣಿ ಚನ್ನಮ್ಮ ಜಯಂತಿಯು ಆಚರಣೆಗೆ ಸಿಮೀತವಾಗದೆ ಸಮುದಾಯದ ಜನರ ಅಭಿವೃದ್ಧಿಗಾಗಿ ಸವಲತ್ತು ನೀಡಬೇಕು’ ಎಂದು ಪಂಚಮಸಾಲಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಜಿ. ಮಲ್ಲಿಕಾರ್ಜುನ ಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಸೋಮವಾರ ಏರ್ಪಡಿಸಿದ್ದ ‘ಕಿತ್ತೂರು ರಾಣಿ ಚನ್ನಮ್ಮ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಜಿಲ್ಲೆಯ ಪ್ರತಿಯೊಂದು ತಾಲ್ಲೂಕು ಕೇಂದ್ರಗಳಲ್ಲಿ ಚನ್ನಮ್ಮ ಹೆಸರಿನಲ್ಲಿ ಭವನ ನಿರ್ಮಾಣ ಮಾಡಬೇಕು. ರಾಜ್ಯದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಪ್ರತಿ ವರ್ಷ ಚನ್ನಮ್ಮ ಜಯಂತಿಯಂದು ವೀರ ಮಹಿಳೆ ಎಂದು ಪ್ರಶಸ್ತಿ ನೀಡಬೇಕು’ ಎಂದರು.

ತಹಶೀಲ್ದಾರ್ ಎಲ್. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಮಸಾಲಿ ಸಮಾಜ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಮರುಳಸಿದ್ದಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಎಂ. ವೀರಯ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ವಿ. ಕೊತ್ಲಪ್ಪ, ಎಲೆ ನಾಗರಾಜ, ಮೊರಬ ಈರಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT