ಜೈಲಿಗೆ ಹೋದವರಿಂದ ಪಾಠ ಅನಗತ್ಯ

ಸೋಮವಾರ, ಮೇ 27, 2019
24 °C

ಜೈಲಿಗೆ ಹೋದವರಿಂದ ಪಾಠ ಅನಗತ್ಯ

Published:
Updated:
ಜೈಲಿಗೆ ಹೋದವರಿಂದ ಪಾಠ ಅನಗತ್ಯ

ಶಿಡ್ಲಘಟ್ಟ: ‘ಜೈಲಿಗೆ ಹೋಗಿ ಬಂದಿರುವ ನಾಯಕರ ಪಡೆಯನ್ನು ಹೊಂದಿರುವ ಬಿಜೆಪಿ ನಾಯಕರಿಂದ ಕಾಂಗ್ರೆಸ್ ಪಾಠ ಕಲಿಯಬೇಕಾಗಿಲ್ಲ. ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಜನರನ್ನು ವಂಚಿಸುತ್ತಿದೆ’ ಎಂದು ಎ.ಐ.ಸಿ.ಸಿ ಕಾರ್ಯದರ್ಶಿ ಮಧು ಯಕ್ಷಿಗೌಡ ದೂರಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಪದಾಧಿಕಾರಿಗಳ ಸಭೆ ಹಾಗೂ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕೇಂದ್ರ ಸರ್ಕಾರ ದೇಶವನ್ನು ಅಭದ್ರತೆಯ ಕಡೆಗೆ ನೂಕುತ್ತಿದೆ’ ಎಂದರು.

‘ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನೆಯನ್ನು ಪರಿಚಯಿಸುವುದರ ಜತೆಗೆ ಜನರ ಸಮಸ್ಯೆ ಆಲಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಪ್ರತಿ ಬೂತ್‌ ಮಟ್ಟದಲ್ಲಿ ಇಬ್ಬರನ್ನು ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ. ಅವರೇ ಕಾರ್ಯಕ್ರಮದ ಸಂಪೂರ್ಣ ಹೊಣೆ ನಿಭಾಯಿಸಬೇಕು’ ಎಂದು ಹೇಳಿದರು.

ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ, ‘ಎಲ್ಲಾ ಜಾತಿ ವರ್ಗದ ಜನರಿಗೆ ಸಮಾನತೆಯ ಅಡಿಯಲ್ಲಿ ಕೊಂಡೊಯ್ಯುವಂತಹ ಏಕೈಕ ಪಕ್ಷ ಕಾಂಗ್ರೆಸ್. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಿಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ₹ 77 ಸಾವಿರ ಕೋಟಿಗಳಷ್ಟು ಸಾಲ ಮನ್ನಾ ಮಾಡಲಾಗಿತ್ತು. ರಾಜ್ಯದಲ್ಲಿ ₹ 50 ಸಾವಿರದವರೆಗೆ ರೈತರ ಸಾಲ ಮನ್ನಾ ಮಾಡಲಾಗಿದೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮನಸ್ವಿನಿ, ಮೈತ್ರಿ, ಸೇರಿದಂತೆ ಹಲವಾರು ಯೋಜನೆಗಳ ಮೂಲಕ ನಾಗರಿಕರ ಏಳಿಗೆಗೆ ಉತ್ತಮ ಆಡಳಿತ ನೀಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ರಾಣಿ ಸತೀಶ್ ಮಾತನಾಡಿ, ‘ರಾಜ್ಯ ಸರ್ಕಾರ, ಮಹಿಳೆಯರ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಮನೆ ಮನೆಗೆ ತಲುಪಿಸಬೇಕಾಗಿದೆ’ ಎಂದರು. ಕೆ.ಪಿ.ಸಿ.ಸಿ.ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ಬೂತ್ ಮಟ್ಟದಿಂದ ಪಕ್ಷದ ಸಂಘಟನೆಯಾಗಬೇಕು. ಬಿಜೆಪಿ ಜನವಿರೋಧಿ ಧೋರಣೆಗಳನ್ನು ಜನರಿಗೆ ಮನಮುಟ್ಟುವಂತೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

ಕಾಂಗ್ರೆಸ್ ನಾಯಕ ವಿ.ಮುನಿಯಪ್ಪ ಮಾತನಾಡಿದರು. ಕೆ.ಪಿ.ಸಿ.ಸಿ.ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ, ಸದಸ್ಯ ಕೆ.ಎಂ.ಸತೀಶ್,   ಕೆ.ಗುಡಿಯಪ್ಪ, ಡಿ.ಬಿ.ವೆಂಕಟೇಶ್, ಮುನೇಗೌಡ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry