ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ: ವರದಿ ಬಿಡುಗಡೆ ನಾಳೆ

Last Updated 24 ಅಕ್ಟೋಬರ್ 2017, 6:21 IST
ಅಕ್ಷರ ಗಾತ್ರ

ದಾವಣಗೆರೆ: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ 2016ನೇ ಸಾಲಿನ ಕರ್ನಾಟಕ ರಾಜ್ಯ ವರದಿ ಬಿಡುಗಡೆ ಕಾರ್ಯಕ್ರಮವನ್ನು ಅ.25ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಸೆನೆಟ್‌ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಎಸ್‌ಸಿ., ಎಸ್‌ಟಿ., ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಮನೋಹರ್‌ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ವಿಕಾಸ್‌ ಕುಮಾರ್, ಎಸ್‌.ಪಿ.ಟಿ., ಪಿ.ಎಸ್‌.ಪಿ., ಸಲಹೆಗಾರ ಇ.ವೆಂಕಟಯ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎಸ್‌.ಕಾಂತರಾಜ್‌, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಮಲ್ಲಿಕಾಘಂಟಿ, ಡಿ.ಬಿ.ನಟೇಶ್‌ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು’ ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ರವಿಕುಮಾರ್, ಮಲ್ಲೇಶ್‌, ಶ್ರೀನಿವಾಸ್, ಕೊಟ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT