ನ.26ಕ್ಕೆ ‘ಕೊಡವ ನ್ಯಾಷನಲ್‌ ಡೇ’

ಸೋಮವಾರ, ಜೂನ್ 24, 2019
26 °C

ನ.26ಕ್ಕೆ ‘ಕೊಡವ ನ್ಯಾಷನಲ್‌ ಡೇ’

Published:
Updated:

ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನ. 26ರಂದು ‘ಕೊಡವ ನ್ಯಾಷನಲ್ ಡೇ’ ಸಮಾವೇಶ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್‌ನ ಅಧ್ಯಕ್ಷ ಎನ್.ಯು. ನಾಚಪ್ಪ ಮಾಹಿತಿ ನೀಡಿದರು.

ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಹಿರಿಯ ರಾಜಕೀಯ ಮುಖಂಡ ಡಾ.ಸುಬ್ರಮಣಿಯನ್ ಸ್ವಾಮಿ ಅವರು ‘ಕೊಡವ ಸ್ವಾತಂತ್ರ್ಯಾನ್ವೇಷಣೆ ಮತ್ತು ಜಾಗತಿಕ ರಾಜಕೀಯ ವಿದ್ಯಮಾನ’ ಕುರಿತು ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಖಿಲ ಭಾರತ ವಿರಾಟ್ ಹಿಂದೂ ಸಂಗಮ್‌ನ ಜಗದೀಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಸಮಸ್ತ ಕೊಡವ ಬಾಂಧವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಕಲಿಯಂಡ ಪ್ರಕಾಶ್, ಪುಲ್ಲೆರ ಕಾಳಪ್ಪ, ಚಂಬಂಡ ಜನತ್ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry