ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ: ಸಯ್ಯದ್ ಶಾಹಿದ್ ಯೂಸುಫ್‌ ಬಂಧನ

ಬುಧವಾರ, ಜೂನ್ 19, 2019
25 °C
ಹಿಜ್ಬುಲ್ ಮುಜಾಹಿದೀನ್ ಸಂಘಟನೆ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‌ ಮಗ

ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ: ಸಯ್ಯದ್ ಶಾಹಿದ್ ಯೂಸುಫ್‌ ಬಂಧನ

Published:
Updated:
ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ: ಸಯ್ಯದ್ ಶಾಹಿದ್ ಯೂಸುಫ್‌ ಬಂಧನ

ಜಮ್ಮುಕಾಶ್ಮೀರ‌: ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಹಿಜ್ಬುಲ್ ಮುಜಾಹಿದೀನ್ ಸಂಘಟನೆ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‌ನ ಮಗ ಸಯ್ಯದ್ ಶಾಹಿದ್ ಯೂಸುಫ್‌ನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ್ದಾರೆ.

ಬಂಧನದ ಬಳಿಕ ರಾಷ್ಟ್ರೀಯ ತನಿಖಾ ದಳ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಶ್ಮೀರ ವಿವಾದಕ್ಕೆ ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆ ನಡೆಸುವುದಕ್ಕಾಗಿ ಗುಪ್ತಚರ ದಳದ (ಐಬಿ) ಮಾಜಿ ನಿರ್ದೇಶಕ ದಿನೇಶ್ವರ್‌ ಶರ್ಮಾ ಅವರನ್ನು ಸಂಧಾನಕಾರರನ್ನಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ಸಯ್ಯದ್ ಶಾಹಿದ್ ಯೂಸುಫ್‌ನನ್ನು ಬಂಧಿಸಲಾಗಿದೆ. 

2011 ರಿಂದ 2014ರ ನಡುವೆ ಸಯ್ಯದ್ ಶಾಹಿದ್ ಯೂಸುಫ್‌ಗೆ  ಸಿರಿಯಾ ಮೂಲದ ಗುಲಾಮ್ ಮೊಹಮ್ಮದ್ ಭಟ್ ಹಣ ವರ್ಗಾವಣೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry