ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2019ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ವೀರಪ್ಪ ಮೊಯಿಲಿ

Last Updated 24 ಅಕ್ಟೋಬರ್ 2017, 11:00 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು 2019ರ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಎಂದು ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಎಂ.ವೀರಪ್ಪ ಮೊಯಿಲಿ ಮಂಗಳವಾರ ತಿಳಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈಚಿನ ಎಂಟು ತಿಂಗಳಿಂದ ವಿರೋಧಿ ಅಲೆಯಿದೆ. 2019ರಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ವೇದಿಕೆ ಸಿದ್ಧವಾಗಿದೆ’ ಎಂದು ಮೊಯ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಮೂಲಕ ಪ್ರಸಕ್ತ ತಿಂಗಳು ಎರಡನೇ ಬಾರಿಗೆ ರಾಹುಲ್ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಮೋಯಿಲಿ ಬಿಂಬಿಸಿದ್ದಾರೆ.

ಕಳೆದ ತಿಂಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಅವರು ಸ್ವತಃ ಉನ್ನತ ಕೆಲಸಕ್ಕಾಗಿ ‘ಸಂಪೂರ್ಣವಾಗಿ ಸಿದ್ಧ’ ಎಂದು ಹೇಳಿದ್ದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಆರ್ಥಿಕ ವಿಷಯದಲ್ಲಿ ‘ಅನನುಭವಿ ಮತ್ತು ದುರ್ಬಳಕೆ’ಯಿಂದ ಕೂಡಿದೆ ಎಂದು ಆಪಾದಿಸಿದ ವೀರಪ್ಪ ಮೊಯಿಲಿ ಅವರು, ನೋಟು ರದ್ದತಿ ಮತ್ತು ಜಿಎಸ್‌ಟಿ ಇದಕ್ಕೆ ಸೂಕ್ತ ಉದಾಹರಣೆ ಎಂದರು.

2013ರಲ್ಲಿ ಕರ್ನಾಟಕ ಕೈಗಾರಿಕೆ ಕ್ಷೇತ್ರದಲ್ಲಿ 11ನೇ ಸ್ಥಾನದಲ್ಲಿತ್ತು. ಈಗ ಪ್ರಥಮ ಸ್ಥಾನದಲ್ಲಿದೆ. ₹1,44,131 ಕೋಟಿ ಹೂಡಿಕೆ ಆಗಿದೆ. 114.19 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ. ಎಲ್ಲ ಸಂಕಷ್ಟಗಳ ನಡುವೆ ಕೈಗಾರಿಕೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿ ಪಡೆದಿದೆ ಎಂದು ರಾಜ್ಯ ಸರ್ಕಾರದ ಸಾಧನೆಯನ್ನು ಮೊಯಿಲಿ ಶ್ಲಾಘಿಸಿದರು.

6,40,925 ಎಕರೆಗೆ ನೀರಾವರಿ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ನೀರಾವರಿಯಲ್ಲಿ ಉತ್ತಮ ಕೆಲಸ ಮಾಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿ ಬಜೆಟ್‌ನಲ್ಲಿ ರಾಜಸ್ವ ಹೆಚ್ಚುವರಿ ಆಗುವಂತೆ ಮಾಡಿದ್ದಾರೆ. ಆರ್ಥಿಕ ಶಿಸ್ತನ್ನು ಸಿಎಂ ಸಿದ್ದರಾಮಯ್ಯ ಅವರು ಕಾಪಾಡಿದ್ದಾರೆ. ತೆರಿಗೆ ವಸೂಲಿಯಲ್ಲೂ ರಾಜ್ಯ ಉತ್ತಮ ಸಾಧನೆ ಮಾಡಿದೆ ಎಂದು ವೀರಪ್ಪ ಮೊಯಿಲಿ ಅವರು ರಾಜ್ಯ ಸರ್ಕಾರವನ್ನು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT