ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌; ಸಿಎಂ, ರಾಜ್ಯಪಾಲರಿಂದ ಸ್ವಾಗತ

ಬುಧವಾರ, ಜೂನ್ 19, 2019
29 °C

ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌; ಸಿಎಂ, ರಾಜ್ಯಪಾಲರಿಂದ ಸ್ವಾಗತ

Published:
Updated:
ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌; ಸಿಎಂ, ರಾಜ್ಯಪಾಲರಿಂದ ಸ್ವಾಗತ

ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳವಾರ ಮಧ್ಯಾಹ್ನ ನಗರಕ್ಕೆ ಆಗಮಿಸಿದರು.

ಮಧ್ಯಾಹ್ನ ಎಚ್‌ಎಎಲ್‌ ವಿಮಾನನಿಲ್ದಾಣಕ್ಕೆ ಬಂದಿಳಿದ ರಾಮನಾಥ ಕೋವಿಂದ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಸ್ವಾಗತಿಸಿದರು.

ವಿಮಾನ ನಿಲ್ದಾಣದಲ್ಲಿ ರಾಮನಾಥ್ ಕೋವಿಂದ್‌ ಅವರಿಗೆ ಪೇಟ ತೊಡಿಸಿ, ಶಾಲು ಹೊದಿಸಿ, ಹೂಗುಚ್ಚ ನೀಡುವ ಮೂಲಕ ಸಿಎಂ ಹಾಗೂ ರಾಜ್ಯಪಾಲರು ಆತ್ಮೀಯ ಸ್ವಾಗತ ಕೋರಿದರು.

ಬೆಂಗಳೂರಿಗೆ ಬಂದಿಳಿದಿರುವ ರಾಮನಾಥ ಕೋವಿಂದ್‌ ಅವರು ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ರಾಮನಾಥ ಕೋವಿಂದ್‌ ಅವರು ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾತ್ರಿ ಎಂಟು ಗಂಟೆಗೆ ಔತಣ ಕೂಟದಲ್ಲಿ ಅವರು ಪಾಲ್ಗೊಳ್ಳುವರು.

ನ.25ರಂದು ವಿಧಾನಸೌಧ ವಜ್ರಮಹೋತ್ಸವದ ಅಂಗವಾಗಿ ನಡೆಯಲಿರುವ ಉಭಯ ಸದನಗಳ ಜಂಟಿ ಅಧಿವೇಶನದಲ್ಲಿ ಅವರು ಭಾಷಣ ಮಾಡಲಿದ್ದಾರೆ.

ರಾಮನಾಥ ಕೋವಿಂದ್‌ ಅವರಿಂದ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry