ಈ ಕಾನೂನು ಬೇಡ

ಗುರುವಾರ , ಜೂನ್ 20, 2019
24 °C

ಈ ಕಾನೂನು ಬೇಡ

Published:
Updated:

ನೂರು ಸಿ.ಸಿ.ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಆಸನ ರದ್ದುಗೊಳಿಸಲು ಮುಂದಾಗಿರುವುದು ಸರಿಯಲ್ಲ. ಹಳ್ಳಿಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನ ಹೆಚ್ಚಾಗಿ 100 ಸಿ.ಸಿ. ಬೈಕ್‌ಗಳನ್ನೇ ಬಳಸುತ್ತಾರೆ. ಸಮೀಪದ ಪಟ್ಟಣಗಳಿಗೆ ಹೋಗುವ ನೌಕರರು, ಬಡ ಕೂಲಿ ಕಾರ್ಮಿಕರು ತಲಾ ಒಂದೊಂದು ವಾಹನ ಖರೀದಿಸಲು ಸಾಧ್ಯವೇ? ಕೆಲವು ಹಳ್ಳಿಗಳಿಗೆ ಸರಿಯಾದ ಬಸ್‌ ಸಂಪರ್ಕವಿಲ್ಲದೇ ಜನರ, ವಿಶೇಷವಾಗಿ ಹೆಣ್ಣುಮಕ್ಕಳ ಪ್ರಯಾಣಕ್ಕೆ ತೊಂದರೆಯಾಗುತ್ತದೆ. ಹೊಸ ನಿಯಮದಿಂದ ಹಳ್ಳಿಯ ಜನರಿಗೆ ಹೆಚ್ಚಿನ ತೊಂದರೆ ಆಗುತ್ತದೆ. ಆದ್ದರಿಂದ ಈ ನಿಯಮವನ್ನು ರದ್ದುಪಡಿಸಬೇಕು.

–ಮಹೇಶ, ಇಚಲಕರಂಜಿ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry