ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷೆ ಭವಿಷ್ಯ

Last Updated 24 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: 22 ವರ್ಷಗಳ ಆಡಳಿತದ ವಿರೋಧಿ ಅಲೆ, ಜಿಎಸ್‌ಟಿ ಜಾರಿ ಬಗ್ಗೆ ವರ್ತಕರ ಅಸಮಾಧಾನ, ಪಟೇಲ್‌, ಒಬಿಸಿ ಮತ್ತು ದಲಿತ ಸಮುದಾಯಗಳ ಪ್ರತಿಭಟನೆಗಳ ನಡುವೆಯೂ ಮುಂಬರುವ ಗುಜರಾತ್‌ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಇಂಡಿಯಾ ಟುಡೇ–ಆಕ್ಸಿಸ್‌ ಮೈ ಇಂಡಿಯಾ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.

ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯು ಸೆಪ್ಟೆಂಬರ್‌ 15–ಅಕ್ಟೋಬರ್‌ 15ರ ನಡುವೆ ರಾಜ್ಯದ ಎಲ್ಲ 182 ಕ್ಷೇತ್ರಗಳಲ್ಲಿ ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದು, ಬಿಜೆಪಿಯು 115–125 ಸ್ಥಾನಗಳನ್ನು ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.

ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ 57ರಿಂದ 65 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದೆ.

ಆಕ್ಸಿಸ್‌ ಸಂಸ್ಥೆಯು ಸಮೀಕ್ಷೆಗಾಗಿ 18,243 ಜನರನ್ನು ಸಂಪರ್ಕಿಸಿದೆ. ಈ ಪೈಕಿ ಶೇ 48 ಜನರು ಬಿಜೆಪಿಗೆ ಮತ ಹಾಕುವುದಾಗಿ ಹೇಳಿದ್ದಾರೆ. ಶೇ 38 ಮಂದಿ ಕಾಂಗ್ರೆಸ್‌ನತ್ತ ಒಲವು ತೋರಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿತ್ತು. ನಂತರ ದೆಹಲಿ, ಬಿಹಾರ ಮತ್ತು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಈ ಸಂಸ್ಥೆ ನಡೆಸಿದ್ದ ಸಮೀಕ್ಷೆಗಳು ನಿಖರವಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT