ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಳ ಚರ್ಚೆ ಇಲ್ಲ

ಬುಧವಾರ, ಜೂನ್ 19, 2019
31 °C

ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಳ ಚರ್ಚೆ ಇಲ್ಲ

Published:
Updated:

ಬೆಂಗಳೂರು: ‘ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಪ್ರಶಸ್ತಿ ಮೊತ್ತ ಹೆಚ್ಚಿಸುವ ವಿಷಯ ಚರ್ಚೆ ನಡೆದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಗಳು ತಿಳಿಸಿವೆ.

ಸಚಿವರಾದ ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ರಾಮಲಿಂಗಾರೆಡ್ಡಿ, ಉಮಾಶ್ರೀ ಅವರನ್ನು ಒಳಗೊಂಡ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ಶಕ್ತಿ ಭವನದಲ್ಲಿ ನಡೆಯಿತು.

‘62 ಜನರ ಪಟ್ಟಿಯನ್ನು ಅಂತಿಮಗೊಳಿಸುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಿತಿ ವಹಿಸಿತು. ಆದರೆ, ಪ್ರಶಸ್ತಿ ಮೊತ್ತ ಹೆಚ್ಚಳದ ವಿಷಯ ಪ್ರಸ್ತಾಪಕ್ಕೆ ಬರಲಿಲ್ಲ’ ಎಂದು ಮೂಲಗಳು ಹೇಳಿವೆ.

ಪ್ರಶಸ್ತಿ ಬಯಸಿ 1786 ಅರ್ಜಿಗಳು ಸಲ್ಲಿಕೆಯಾಗಿದ್ದವು. 21 ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡುತ್ತಿರುವ ಪ್ರಶಸ್ತಿ ನೀಡಲಾಗುವುದು ಎಂದೂ ಮೂಲಗಳು ತಿಳಿಸಿವೆ.

ಈಗ ಪ್ರಶಸ್ತಿಗೆ 124 ಮಂದಿ ಹೆಸರಿನ ಪಟ್ಟಿ ಸಿದ್ಧವಾಗಿದೆ. ಇದರಲ್ಲಿ ಅಂತಿಮವಾಗಿ 62 ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಸ್ಪಷ್ಟಪಡಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry