ಶಾಲಾ ಸಬಲೀಕರಣ ಸಮಿತಿ ವರದಿ ಅನುಷ್ಠಾನಕ್ಕೆ ಆಗ್ರಹ

ಮಂಗಳವಾರ, ಜೂನ್ 25, 2019
25 °C

ಶಾಲಾ ಸಬಲೀಕರಣ ಸಮಿತಿ ವರದಿ ಅನುಷ್ಠಾನಕ್ಕೆ ಆಗ್ರಹ

Published:
Updated:
ಶಾಲಾ ಸಬಲೀಕರಣ ಸಮಿತಿ ವರದಿ ಅನುಷ್ಠಾನಕ್ಕೆ ಆಗ್ರಹ

ಬೆಂಗಳೂರು: ‘ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ವರದಿಯನ್ನು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಮಂಡಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ಧರಾಮಯ್ಯ ಆಗ್ರಹಿಸಿದರು.

‘ಸರ್ಕಾರಿ ಶಾಲೆಗಳನ್ನು ಉಳಿಸಲು ವೈಜ್ಞಾನಿಅಕವಾಗಿ ಅಧ್ಯಯನ ನಡೆಸಿ ಪ್ರಮುಖ 21 ಶಿಫಾರಸುಗಳನ್ನು ಮಾಡಲಾಗಿದೆ. ಸಚಿವ ಸಂಪುಟ ಮತ್ತು ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ. ಬೇಕಿರುವ ಸಿದ್ಧತೆಗಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಡಿಕೊಳ್ಳಬೇಕು’ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದರು.

ವರದಿ ಅನುಷ್ಠಾನ ಸಂಬಂಧ ಸರ್ಕಾರದ ಗಮನ ಸೆಳೆಯಲು ಇದೇ 30 ಮತ್ತು 31ರಂದು ರಾಜ್ಯ ಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶವನ್ನು ನಗರದ ಶಿಕ್ಷಕರ ಸದನದಲ್ಲಿ ಏರ್ಪಡಿಸಲಾಗಿದೆ. ಶಿಕ್ಷಣ ಸಚಿವ ತನ್ವೀರ್ ಸೇಠ್ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡುವರು ಎಂದು ಹೇಳಿದರು.‌

ಶಾಲಾ ಅಭಿವೃದ್ಧಿ ಸಮಿತಿಗಳ ಪರವಾಗಿ 500 ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಸಮಾವೇಶದ ಉದ್ಘಾಟನೆ ದಿನ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಶಿಕ್ಷಕರ ಸದನದವರೆಗೆ ಮೆರವಣಿಗೆ ನಡೆಸಲಾಗುವುದು ಎಂದೂ ಅವರು ತಿಳಿಸಿದರು.

ಶಾಲೆಗಳ ಸಬಲೀಕರಣ ಸಮಿತಿ ವರದಿ ಅನುಷ್ಠಾನ ಸಂಬಂಧ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ’ ಎಂದು ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry