ರಸ್ತೆ ಅಬಿವೃದ್ಧಿಗೆ ಒತ್ತಾಯ

ಶುಕ್ರವಾರ, ಮೇ 24, 2019
24 °C

ರಸ್ತೆ ಅಬಿವೃದ್ಧಿಗೆ ಒತ್ತಾಯ

Published:
Updated:

ಸಂತೇಮರಹಳ್ಳಿ: ಸಮೀಪದ ದೇಶವಳ್ಳಿ ಗ್ರಾಮದಿಂದ ಸಂತೇಮರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ದೇಶವಳ್ಳಿ ಹಾಗೂ ಹೆಗ್ಗವಾಡಿಪುರ ಗ್ರಾಮಗಳಿಂದ ಸಂತೇಮರಹಳ್ಳಿಗೆ ಬರಲು ಜನರು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಆದರೆ, ರಸ್ತೆ ಅವ್ಯವಸ್ಥೆಯಿಂದಾಗಿ, ರಸ್ತೆಯಲ್ಲಿ ಮಳೆ ನೀರು ನಿಂತು ಜನರ ಹಾಗೂ ವಾಹನಗಳ ಓಡಾಟಕ್ಕೆ ತೊಂದರೆಯಾಗಿದೆ. ಹಳ್ಳ ಕೊಳ್ಳಗಳು ಉಂಟಾಗಿ ಈ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ.

ಈ ಗ್ರಾಮಗಳಿಂದ ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳಿದ್ದು, ರೈತ ಸಂಪರ್ಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೂ ಈ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.

ಅನಿವಾರ್ಯವಾಗಿ ಬಸ್ ನಿಲ್ದಾಣದಿಂದ ಸುತ್ತಿ ಬಳಸಿ ವಿದ್ಯಾರ್ಥಿಗಳು ಹಾಗೂ ಜನರು ಓಡಾಡಬೇಕಾಗಿದೆ. ಆದ್ದರಿಂದ ಈ ರಸ್ತೆಯನ್ನು ಕೂಡಲೇ ಅಭಿವೃದ್ಧಿ ಪಡಿಸಬೇಕುಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry