ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಅವಘಡ ಬಗ್ಗೆ ಜಾಗೃತಿ ಮೂಡಿಸಲು ಮನವಿ

Last Updated 25 ಅಕ್ಟೋಬರ್ 2017, 6:08 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಮಳೆ ನೀರಿನಲ್ಲಿ ಮಕ್ಕಳು ಈಜಾಡಲು ಹೋಗಿ ಮೃತಪಡುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಜನಸಂಸ್ಥಾನ ಸಂಸ್ಥೆ ವಿರೂಪಾಕ್ಷಪ್ಪ ತಿಳಿಸಿದರು.

ಮೊಳಕಾಲ್ಮುರು ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ನೀರಿನಲ್ಲಿ ಮೃತಪಟ್ಟ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಅನಾಹುತ ಮಾಡಿಕೊಂಡ ಘಟನೆಗಳು ಸಾಕಷ್ಟು ನಡೆದಿವೆ. 6–7 ವರ್ಷ ನಂತರ ಈ ಬಾರಿ ಉತ್ತಮ ಮಳೆಯಾಗಿದ್ದು, ಕೆರೆ, ಕಟ್ಟೆ, ಚೆಕ್‌ಡ್ಯಾಂಗಳಲ್ಲಿ ನೀರು ತುಂಬಿಕೊಂಡಿದೆ. ಸಹಜವಾಗಿಯೇ ಮಕ್ಕಳು ಖುಷಿಗಾಗಿ ನೀರಿನಲ್ಲಿ ಆಟವಾಡಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿದರು. 

ಕಟ್ಟೆ, ಚೆಕ್‌ ಡ್ಯಾಂಗಳಲ್ಲಿ ಹೆಚ್ಚಿನ ಹೂಳು ತುಂಬಿದ್ದು ಅಪಘಾತ ತೀವ್ರತೆ ಹೆಚ್ಚಲು ಮತ್ತೊಂದು ಕಾರಣವಾಗಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಗಳು, ಕಂದಾಯ ಇಲಾಖೆ ಕರಪತ್ರ ಹಾಗೂ ಧ್ವನಿವರ್ಧಕ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT