ವಾಲ್ಮೀಕಿ ಸಭಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕರಿಗೆ ಮನವಿ

ಬುಧವಾರ, ಜೂನ್ 19, 2019
30 °C

ವಾಲ್ಮೀಕಿ ಸಭಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕರಿಗೆ ಮನವಿ

Published:
Updated:

ಹಾನಗಲ್‌: ‘ಪಟ್ಟಣದಲ್ಲಿ ವಾಲ್ಮೀಕಿ ಸಭಾ ಭವನ ನಿರ್ಮಾಣಕ್ಕೆ ಸರ್ಕಾರ ದಿಂದ ₹ 25 ಲಕ್ಷ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿ ಕುರುಬ ಸಮಾಜದ ಮುಖಂಡರು ಮಂಗಳವಾರ ಶಾಸಕ ಮನೋಹರ ತಹಸೀಲ್ದಾರ್‌ ಗೆ ಮನವಿಪತ್ರ ಸಲ್ಲಿಸಿದರು.

‘ಪಟ್ಟಣದ ಕುರುಬಗೇರಿ ಭಾಗದಲ್ಲಿರುವ ಕುರುಬ ಸಮಾಜದ ಆರಾಧ್ಯ ದೈವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮ ಗಾರಿ ನಡೆಯುತ್ತಿದ್ದು, ದೇವಸ್ಥಾನಕ್ಕೆ ಹೊಂದಿಕೊಂಡ ಖಾಲಿ ಜಾಗೆಯಲ್ಲಿ ಕುರುಬ ಸಮಾಜದ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಿಗಾಗಿ ಭವನ ನಿರ್ಮಾಣ ಅಗತ್ಯವಾಗಿದೆ.

ಭವನ ನಿರ್ಮಾಣಕ್ಕೆ ಈಗಾಗಲೇ ವಂತಿಗೆ ರೂಪದಲ್ಲಿ ಹಣ ಸಂಗ್ರಹಣೆ ನಡೆ ಯುತ್ತಿದೆ. ಸರ್ಕಾರದ ಸಹಾಯಧನ ಪ್ರಮುಖವಾಗಿದೆ, ಹೀಗಾಗಿ ₹ 25 ಲಕ್ಷ ಅನುದಾನ ಬಿಡುಗಡೆ ಮಾಡಬೇಕು’ ಎಂದು ಮನವಿಯಲ್ಲಿ ಒತ್ತಾಯಿ ಸಲಾಗಿದೆ.

‘ಉದ್ದೇಶಿತ ಕನಕ ಭವನ ನಿರ್ಮಾಣದ ಜಾಗೆಯ ದಾಖಲೆ ಪರಿಶೀಲಿಸಿ ಅನುದಾನ ಬಿಡುಗಡೆಯ ಪ್ರಕ್ರಿಯೆ ನಡೆಸಲಾಗುತ್ತದೆ, ಈಗಾಗಲೇ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಕುರುಬ ಸಮಾಜಕ್ಕೆ ಸಭಾ ಭವನ ನಿರ್ಮಾಣ ಮಾಡಲಾಗಿದೆ, ಪಟ್ಟಣದಲ್ಲಿಯೂ ವ್ಯವಸ್ಥಿತ ಭವನ ನಿರ್ಮಾಣದ ಆಸಕ್ತಿ ಇದೆ’ ಎಂದರು.

ಬೀರಲಿಂಗೇಶ್ವರ ಟ್ರಸ್ಟ್ ಅಧ್ಯಕ್ಷ ದಾನಪ್ಪ ಗಂಟೇರ, ಗೌರವ ಅಧ್ಯಕ್ಷ ಭೋಜರಾಜ ಕರೂದಿ, ಸುರೇಶ ದೊಡ್ಡಕುರುಬರ, ಮಹೇಶ ಪವಾಡಿ, ರಾಮಚಂದ್ರ ಹೊಸಮನಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry