ಎಸ್‌.ಐ. ಮೇಲೆ ಹಲ್ಲೆ, ಆರೋಪಿಗೆ ಗುಂಡೇಟು

ಬುಧವಾರ, ಮೇ 22, 2019
24 °C

ಎಸ್‌.ಐ. ಮೇಲೆ ಹಲ್ಲೆ, ಆರೋಪಿಗೆ ಗುಂಡೇಟು

Published:
Updated:

ಕನಕಪುರ: ಬಂಧಿಸಲು ಹೋದ ಪೊಲೀಸರಿಗೆ ಚಾಕುವಿನಿಂದ ಇರಿದ ಕೊಲೆ ಆರೋ‍ಪಿ ಮೇಲೆ ಸೋಮವಾರ ರಾತ್ರಿ ಗುಂಡು ಹಾರಿಸಿ ಬಂಧಿಸಿದ ಘಟನೆ ಸಾತನೂರು ಹೋಬಳಿ ಬೋರೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಆರೋಪಿ ಚಂದ್ರು (21) ಈಗ ಪೊಲೀಸರ ಅತಿಥಿಯಾಗಿದ್ದಾನೆ. ನಗರ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅನಂತ್‌ರಾಮ್‌ ಅವರ ಕೈಗೆ ಚೂರಿ ಇರಿತದಿಂದ ಗಾಯಗಳಾಗಿವೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾತನೂರು ಹೋಬಳಿ ಹಲಸೂರು ಗ್ರಾಮದ ಪುಟ್ಟಸ್ವಾಮಿಗೌಡರ ಪತ್ನಿ ಕೆಂಪಮ್ಮ ಅವರನ್ನು ಒಂದು ತಿಂಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಕೊಲೆ ಆರೋಪಿಯಾದ ಚಂದ್ರು ಬಂಧನಕ್ಕೆ ಪೊಲೀಸರ ಮೂರು ತಂಡಗಳು ತೆರಳಿದ್ದವು.

‘ಮನೆಯನ್ನು ಸುತ್ತುವರಿದು ಆರೋಪಿಯನ್ನು ವಶಕ್ಕೆ ಪಡೆದು ಹೊರಕ್ಕೆ ಕರೆತಂದಿದ್ದೆವು. ಆಗ ಆತ ಅನಂತರಾಮ್‌ ಅವರ ಮೇಲೆ ಹಲ್ಲೆ ನಡೆಸಿದ’ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಕು ಬಿಸಾಡುವಂತೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಮಲ್ಲೇಶ್‌ ಹೇಳಿದರೂ ಆತ ಕೇಳಲಿಲ್ಲ. ಆಗ ಪೊಲೀಸ್‌ ಕಾನ್‌ಸ್ಟೆಬಲ್‌ ಮಲ್ಲೇಶ್‌ ಅವರು ಆರೋಪಿ ಕಾಲಿಗೆ ಪಿಸ್ತೂಲಿನಿಂದ ಗುಂಡು ಹೊಡೆದಿದ್ದಾಗಿ ಹೇಳಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry