ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಷ್ಮಾ ಸ್ವರಾಜ್‌ರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ

Last Updated 25 ಅಕ್ಟೋಬರ್ 2017, 11:39 IST
ಅಕ್ಷರ ಗಾತ್ರ

ನವದೆಹಲಿ: ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್‌ ಟಿಲ್ಲರ್‌ಸನ್‌ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.

ಪಾಕಿಸ್ತಾನ, ಸೌದಿ ಅರೇಬಿಯಾ, ಖತಾರ್, ಸ್ವಿಟ್ಜರ್ಲೆಂಡ್, ಭಾರತ ಸೇರಿದಂತೆ ಒಟ್ಟು ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿರುವ ಟಿಲ್ಲರ್‌ಸನ್ ಅವರು ಮಂಗಳವಾರ ಸಂಜೆ ದೆಹಲಿಗೆ ಬಂದಿಳಿದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಿಲ್ಲರ್‌ಸನ್ ಅವರು, ಭಾರತೀಯ ರಕ್ಷಣಾಪಡೆಗೆ ತಾಂತ್ರಿಕ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ಸುಷ್ಮಾ ಸ್ವರಾಜ್ ಅವರು ಟಿಲ್ಲರ್‌ಸನ್ ಅವರ ಜತೆ ಭಯೋತ್ಪಾದನೆ ಹಾಗೂ ಎಚ್‌1–ಬಿ ವೀಸಾಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದು, ಭಾರತೀಯರ ಮೇಲೆ ಪ್ರತಿಕೂಲ ಪರಿಣಾಮ ಬೀರದಂತೆ ನೋಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. 

ಆಗ ಟಿಲ್ಲರ್‌ಸನ್ ಅವರು, ಎಚ್‌1–ವೀಸಾ ನಿಯಮದಲ್ಲಿ ಇದುವರೆಗೆ ಯಾವುದೇ ಬದಲಾವಣೆಗಳನ್ನು ಕೈಗೊಂಡಿಲ್ಲ. ಆದರೆ ಕೆಲವು ಬದಲಾವಣೆ ತರುವ ಬಗ್ಗೆ ಯೋಚನೆ ಇದೆ. ಇದರಿಂದ ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯಕ್ಕೆ ಧಕ್ಕೆ ಬರುವುದಿಲ್ಲ ಎಂದಿದ್ದಾರೆ. 

ಪಾಕಿಸ್ತಾನವು ಅಲ್ಲಿನ ಭಯೋತ್ಪಾದಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದಾಗ ಮಾತ್ರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಯೋತ್ಪಾದನೆ ವಿರುದ್ಧ ಕೈಗೊಂಡ ಯೋಜನೆ ಯಶಸ್ವಿಯಾಗಲಿದೆ. ಅಫ್ಗಾನಿಸ್ತಾನ, ಭಾರತ, ಅಮೆರಿಕ ದೇಶಗಳ ತ್ರಿಪಕ್ಷೀಯ ಮಾತುಕತೆ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದಿದ್ದಾರೆ.

ಮಾತುಕತೆ ಬಳಿಕ ಟಿಲ್ಲರ್‌ಸನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಪ್ರವಾಸದ ನಂತರ ಅಫ್ಗಾನಿಸ್ತಾನ ಹಾಗೂ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT