ಶನಿವಾರ, ಸೆಪ್ಟೆಂಬರ್ 21, 2019
21 °C

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

Published:
Updated:

ಹೊಸನಗರ: ಕಿತ್ತೂರು ರಾಣಿ ಚೆನ್ನಮ್ಮನ ವೀರಗುಣಗಳನ್ನು ಸ್ತ್ರೀಯರು ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಚಂದ್ರಶೇಖರ ನಾಯ್ಕ ಸಲಹೆ ನೀಡಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಕಂದಾಯ ಇಲಾಖೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪಟ್ಟಣ ಪಂಚಾಯ್ತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ವಿಸ್ತೀರ್ಣದಲ್ಲಿ ಪುಟ್ಟ ರಾಜ್ಯವಾಗಿದ್ದ ಕಿತ್ತೂರಿನ ಮೇಲೆ ಬ್ರಿಟಿಷರು ಆಕ್ರಮಣ ಮಾಡಿದಾಗ ಎದೆಗುಂದದೆ ಹೋರಾಡಿದ ಕೀರ್ತಿ ರಾಣಿ ಚೆನ್ನಮ್ಮ ಅವರದ್ದು ಎಂದರು.

ತಾಲ್ಲೂಕು ಪಂಚಾಯ್ತಿ ಸದಸ್ಯ ಏರಿಗೆ ಉಮೇಶ್, ಉಪ ತಹಶೀಲ್ದಾರ್ ಎಂ.ಆರ್.ಅರವಿಂದ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಪ್ಪ ಗೌಡ, ನಾಡ ಹಬ್ಬಗಳ ಆಚರಣಾ ಸಮಿತಿ ಸದಸ್ಯರಾದ ಶ್ರೀನಿವಾಸ್ ಕಾಮತ್, ಶ್ರೀಧರ್ ಉಡುಪ, ತಾಲ್ಲೂಕು ಪಂಚಾಯ್ತಿ ವ್ಯವಸ್ಥಾಪಕ ಅಶ್ವಿನಿಕುಮಾರ, ಗ್ರಂಥಪಾಲಕ ಅಶೋಕ್ ಗುಳೇದ, ಆರೋಗ್ಯ ಇಲಾಖೆಯ ಕರಿಬಸಮ್ಮ ಅವರೂ ಹಾಜರಿದ್ದರು.

Post Comments (+)