ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ

ಶುಕ್ರವಾರ, ಮೇ 24, 2019
28 °C

ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ

Published:
Updated:

ತುಮಕೂರು: ‘ಮಾಂಸ ತಿಂದು ದೇವಾಲಯಕ್ಕೆ ಹೋದರೆ ತಪ್ಪೇನು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಬರಲಿ’ ಎಂದು ಮಾಜಿ ಸಚಿವ, ಬಿಜೆಪಿಯ ಎಸ್‌.ಶಿವಣ್ಣ ಸವಾಲು ಹಾಕಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಹಾಗೂ ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮ ವಿಷಯ ಎತ್ತೊಕೊಂಡು ಸಮಾಜವನ್ನು ಒಡೆದಿದ್ದಾರೆ’ ಎಂದು ಆರೋಪಿಸಿದರು.

‘ಅಧಿಕಾರವಿದೆ ಎಂಬ ಅಹಂಕಾರದಿಂದ ಮೆರೆಯಬಾರದು. ಜಾತಿ ಧರ್ಮಗಳ ಮಧ್ಯೆ ದ್ವೇಷ ಬಿತ್ತುವ ಕೆಲಸ ಮಾಡಬಾರದು. ಸಮಾಜ ಒಡೆಯುವ ಹುನ್ನಾರವನ್ನು ಮುಖ್ಯಮಂತ್ರಿ ಬಿಡಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry