ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ಕಟ್ಟುವ ಕೆಲಸಕ್ಕೆ ಕೈಜೋಡಿಸಿ: ಸಚಿವ

Last Updated 25 ಅಕ್ಟೋಬರ್ 2017, 9:24 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೊದ್ ಮಧ್ವರಾಜ್ ಹೇಳಿದರು. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಗರಡಿ ಮಜಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಮುಂದಿನ ಪ್ರಜೆಗಳಾದ ಯುವಕರು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿನಿಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಮಾಜ ಕಟ್ಟುವ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ವಿಘ್ನೇಶ್ವರ ಭಟ್ ಮಾತನಾಡಿ, ಶಿಬಿರದ ಪೂರ್ಣ ಲಾಭವನ್ನು ಪಡೆದುಕೊಳ್ಳಿ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ ಮುಖ್ಯ ಅತಿಥಿಯಾಗಿದ್ದರು. ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ, ಉಪಾ ಧ್ಯಕ್ಷೆ ಸುನೀತಾ ಆಚಾರ್, ಉದ್ಯಮಿ ಪ್ರಖ್ಯಾತ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಧನಂಜಯ ಕುಮಾರ್, ಭೂನ್ಯಾಯಮಂಡಳಿ ಸದಸ್ಯ ಪೃಥ್ವಿರಾಜ್ ಶೆಟ್ಡಿ, ತೆಂಕನಿಡಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ದಯಾನಂದಶೆಟ್ಟಿ, ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ವಿಜಯಲಕ್ಷ್ಮೀ ಬಿ.ನಾಯಕ್, ಗರಡಿಮಜಲು ಶಾಲೆಯ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಕೊಟ್ಯಾನ್ ಮತ್ತು ಮುಖ್ಯೋಪಾಧ್ಯಾಯಿನಿ ರತ್ನಾ ಇದ್ದರು.
ಶಿಬಿರದ ಅಧಿಕಾರಿ ಎಚ್.ಎಂ. ಅನುರಾಧ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರದ ನಾಯಕರಾದ ನಾಗರಾಜ್ ಮತ್ತು ಎನ್‌.ಬಿ. ಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಸಹಶಿಬಿರದ ಅಧಿಕಾರಿ ಕಿರಣರಾಮ್ ವಝೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT