ಪಿಚ್ ರಿಪೋರ್ಟ್ ನೀಡಿದ್ದ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅಮಾನತು

ಮಂಗಳವಾರ, ಜೂನ್ 18, 2019
23 °C
ಭಾರತ, ನ್ಯೂಜಿಲೆಂಡ್ ಎರಡನೇ ಏಕದಿನ ಪಂದ್ಯ

ಪಿಚ್ ರಿಪೋರ್ಟ್ ನೀಡಿದ್ದ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅಮಾನತು

Published:
Updated:
ಪಿಚ್ ರಿಪೋರ್ಟ್ ನೀಡಿದ್ದ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅಮಾನತು

ನವದೆಹಲಿ: ಭಾರತ, ನ್ಯೂಜಿಲೆಂಡ್ ಎರಡನೇ ಏಕದಿನ ಪಂದ್ಯದ ವೇಳೆ ಹಣ ಪಡೆದು ಬುಕ್ಕಿಗಳಿಗೆ ಪಿಚ್ ರಿಪೋರ್ಟ್ ನೀಡಲು ಮುಂದಾಗಿದ್ದರು ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಪುಣೆ ಕ್ರಿಕೆಟ್ ಮೈದಾನ ಪಿಚ್ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅವರನ್ನು ಬಿಸಿಸಿಐ ಅಮಾನತು ಮಾಡಿದೆ.

ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಬ್ ಚೌಧರಿ ಅವರು ಪಿಚ್ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅವರನ್ನು ಅಮಾನತು ಮಾಡಿದ್ದಾರೆ.

ಇಂಡಿಯಾ ಟುಡೆ ಸುದ್ದಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆ ವೇಳೆ ಪಾಂಡುರಂಗ ಸಲಗಾಂವ್ಕರ್ ಇದು ಬ್ಯಾಟಿಂಗ್ ಪಿಚ್‌ ಆಗಿದ್ದು ಇಲ್ಲಿ 340 ರನ್‌ಗಳನ್ನು ಸುಲಭವಾಗಿ ಗಳಿಸಬಹುದು ಎಂದು ಹೇಳಿದ್ದರು. ಪಾಂಡುರಂಗ ಸಲಗಾಂವ್ಕರ್ ಅವರು ಈ ಮಾಹಿತಿಯನ್ನು ಕ್ರಿಕೆಟ್‌ ಬುಕ್ಕಿಗಳ ಜತೆ ಹಂಚಿಕೊಂಡಿರುವ ಸಾಧ್ಯತೆಗಳಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿತ್ತು.ಬಿಸಿಸಿಐ ನಿಯಮಗಳ ಪ್ರಕಾರ ಪಂದ್ಯ ಆರಂಭಕ್ಕೂ ಮುನ್ನ ಪಿಚ್ ಮಾಹಿತಿ ನೀಡುವಂತಿಲ್ಲ. ಹಾಗೂ ಕ್ರಿಕೆಟ್‌ ಆಡುವ ಆಟಗಾರರಿಗೂ ಪಿಚ್ ಮಾಹಿತಿ ನೀಡುವಂತಿಲ್ಲ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry