ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಮಾಡಿಸುವುದಿಲ್ಲ: ಮಮತಾ ಬ್ಯಾನರ್ಜಿ

ಭಾನುವಾರ, ಜೂನ್ 16, 2019
25 °C

ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಮಾಡಿಸುವುದಿಲ್ಲ: ಮಮತಾ ಬ್ಯಾನರ್ಜಿ

Published:
Updated:
ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಮಾಡಿಸುವುದಿಲ್ಲ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ನನ್ನ ಮೊಬೈಲ್‌ ಸಂಖ್ಯೆಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತದ ನಜ್ರುಲ್ ಮಂಚ್‌ನಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಬುಧವಾರ ಮಾತನಾಡಿದರು.

‘‌ಮೊಬೈಲ್‌ ಸಂಪರ್ಕವನ್ನು ಕಡಿತಗೊಳಿಸಿದರೂ ಪರವಾಗಿಲ್ಲ. ಯಾವುದೇ ಕಾರಣಕ್ಕೂ ನನ್ನ ಮೊಬೈಲ್‌ ಸಂಖ್ಯೆಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡಿಸುವುದಿಲ್ಲ’ ಎಂದಿದ್ದಾರೆ.

ಹೊಸ ಮೊಬೈಲ್‌ ಸಿಮ್‌ ಸಂಪರ್ಕ ಪಡೆಯಲು ಬಯಸುವವರು ಇನ್ನು ಮುಂದೆ ಆಧಾರ್‌ ಆಧಾರಿತ ವಿದ್ಯುನ್ಮಾನ–ದೃಢೀಕರಣ (ಇ–ಕೆವೈಸಿ: ಎಲೆಕ್ಟ್ರಾನಿಕ್‌–ನೋ ಯುವರ್‌ ಕಸ್ಟಮರ್‌) ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ ಎಂದು ಟೆಲಿಕಾಂ ಇಲಾಖೆ ಹೊಸ ನಿಯಮವನ್ನು ಜಾರಿಗೊಳಿಸಿರುವ ಕುರಿತು ಮಮತಾ ಬ್ಯಾನರ್ಜಿ ಮಾತನಾಡಿದರು. 

ಮೊಬೈಲ್‌ ಸಂಖ್ಯೆಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿಸುವುದರಿಂದ ನಮ್ಮ ಖಾಸಗಿ ಹಕ್ಕಿಗೆ ತೊಂದರೆ ಉಂಟಾಗುತ್ತದೆ ಎಂದಿರುವ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಧಾರ್‌ ಕಡ್ಡಾಯ ನಿಯಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಬೇಕೆಂದು ಆಗ್ರಹಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry