ನ್ಯೂಜಿಲೆಂಡ್‌ ವಿರುದ್ಧ ಗೆದ್ದ ಭಾರತ

ಬುಧವಾರ, ಮೇ 22, 2019
32 °C

ನ್ಯೂಜಿಲೆಂಡ್‌ ವಿರುದ್ಧ ಗೆದ್ದ ಭಾರತ

Published:
Updated:
ನ್ಯೂಜಿಲೆಂಡ್‌ ವಿರುದ್ಧ ಗೆದ್ದ ಭಾರತ

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ನ್ಯೂಜಿಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಆರು ವಿಕೆಟ್‌ ಗೆಲುವು ಸಾಧಿಸಿತು.

231 ರನ್‌ ಗೆಲುವಿನ ಗುರಿ ಬೆನ್ನಟ್ಟಿದ ಭಾರತ 46 ಓವರ್‌ಗಳಲ್ಲಿ ಜಯ ಸಾಧಿಸಿತು. ಶಿಖರ್‌ ಧವನ್ ಹಾಗೂ ದಿನೇಶ್‌ ಕಾರ್ತಿಕ್‌ ಅರ್ಧಶತಕದ ನೆರವಿನಿಂದ ಭಾರತ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್‌ ತಂಡಕ್ಕೆ ಭುವನೇಶ್ವರ್‌ ಕುಮಾರ್ ಬೌಲಿಂಗ್‌ ಆಘಾತ ನೀಡಿತು. 58 ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ನ್ಯೂಜಿಲೆಂಡ್‌ 9 ವಿಕೆಟ್‌ ನಷ್ಟಕ್ಕೆ 230 ರನ್‌ಗಳಷ್ಟೇ ಗಳಿಸಲು ಶಕ್ತವಾಯಿತು.

ಭಾರತದ ಪರ: ಶಿಖರ್ ಧವನ್‌ 68, ದಿನೇಶ್‌ ಕಾರ್ತಿಕ್‌ 64, ವಿರಾಟ್‌ ಕೊಹ್ಲಿ 29, ಹಾರ್ದಿಕ್‌ ಪಾಂಡ್ಯ 30

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry