ಜಾಮೀನು ಷರತ್ತು ಸಡಿಲಿಕೆ ಕುಮಾರಸ್ವಾಮಿ ಅರ್ಜಿ

ಬುಧವಾರ, ಜೂನ್ 26, 2019
25 °C

ಜಾಮೀನು ಷರತ್ತು ಸಡಿಲಿಕೆ ಕುಮಾರಸ್ವಾಮಿ ಅರ್ಜಿ

Published:
Updated:
ಜಾಮೀನು ಷರತ್ತು ಸಡಿಲಿಕೆ ಕುಮಾರಸ್ವಾಮಿ ಅರ್ಜಿ

ಬೆಂಗಳೂರು:  ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಮ್ಮ ನಿರೀಕ್ಷಣಾ ಜಾಮೀನಿನ ಷರತ್ತು ಸಡಿಲಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಈ ಮೊದಲು ನಿಮಗೆ ನಿರೀಕ್ಷಣಾ ಜಾಮೀನು ನೀಡಿರುವ ನ್ಯಾಯಮೂರ್ತಿ ರತ್ನಕಲಾ ಅವರಿ ನ್ಯಾಯಪೀಠದ ಮುಂದೆಯೇ ಈ ಅರ್ಜಿಯನ್ನೂ ಸಲ್ಲಿಸಿ’ ಎಂದು ಬೂದಿಹಾಳ್‌ ಸೂಚಿಸಿದರು.

‘ನಾನು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದ್ದರಿಂದ 15 ದಿನಗಳಿಗೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ವಿಧಿಸಲಾಗಿರುವ ಷರತ್ತು ಸಡಿಸಲಬೇಕು’ ಎಂದು ಕೋರಿ ಕುಮಾರಸ್ವಾಮಿ ಈ ಅರ್ಜಿ ಸಲ್ಲಿಸಿದ್ದಾರೆ.

ಜಂತಕಲ್ ಮೈನಿಂಗ್ ಕಂಪೆನಿಗೆ ಗಣಿ ಪರವಾನಗಿ ನೀಡುವಂತೆ ಐಎಎಸ್ ಅಧಿಕಾರಿ ಮೇಲೆ ಒತ್ತಡ ಹೇರಿದ ಆರೋಪವನ್ನು ಕುಮಾರಸ್ವಾಮಿ

ಎದುರಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry