ಡಿ.15ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ

ಬುಧವಾರ, ಜೂನ್ 19, 2019
25 °C

ಡಿ.15ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ

Published:
Updated:

ದಾಬಸ್‌ಪೇಟೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 15, 16 ರಂದು ನೆಲಮಂಗಲ ತಾಲ್ಲೂಕಿನ ಸೋಂಪುರದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ ಗ್ರಾಮಾಂತರ ಜಿಲ್ಲಾ ಘಟಕ ತೀರ್ಮಾನಿಸಿದೆ.

ಈ ಕುರಿತು ಸಭೆ ನಡೆಸಿದ ಘಟಕದ ಪದಾಧಿಕಾರಿಗಳು, ಸಮ್ಮೇಳನದ ಅಧ್ಯಕ್ಷರಾಗಿ ಪವಾಡ ಭಂಜಕ ಹುಲಿಕಲ್ ನಟರಾಜ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

‘ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಘಟಕ ವಿಶೇಷ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಿದೆ. ಜಿಲ್ಲೆಯ ಇತಿಹಾಸ ಮತ್ತು ದೇವಾಲಯ ಹಾಗೂ ಸಾಹಿತ್ಯದ ಕೊಡುಗೆಗಳ ಕುರಿತು ಪ್ರಕಟಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಲೇಖನಗಳು, ಕವನಗಳನ್ನು ಕಳುಹಿಸಲು ಇಚ್ಛಿಸುವವರು. ನವೆಂಬರ್‌ 20ರೊಳಗೆ ಬರಹಗಳನ್ನು ತಲುಪಿಸಬೇಕು’ ಎಂದು ತಿಳಿಸಿದರು.

‘ಸಮ್ಮೇಳನ ನಡೆಯುವ ಸ್ಥಳದಲ್ಲಿ ಪುಸ್ತಕ ಮಳಿಗೆ ಹಾಗೂ ಇತರ ಮಳಿಗೆಗಳನ್ನು ತೆರೆಯಲು ಆಸಕ್ತಿ ಇರುವವರು ಹಾಗೂ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ನವೆಂಬರ್ 1ರ ಒಳಗಾಗಿ ಕಸಾಪ ಅಧ್ಯಕ್ಷರನ್ನು ಸಂಪರ್ಕಿಸಿ, ಮಾಹಿತಿ ನೀಡಬೇಕು.’

‘ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾ ತಂಡಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ವಸತಿ, ಊಟದ ವ್ಯವಸ್ಥೆ ಇರುತ್ತದೆ. ದೊಡ್ಡಬಳ್ಳಾಪುರ ಹಾಗೂ ನೆಲಮಂಗಲದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry