ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯನ್ನು ದುರ್ಬೀನು ಹಾಕಿಕೊಂಡು ಹುಡುಕಬೇಕು: ಮಂಜಪ್ಪ ತಿರುಗೇಟು

Last Updated 26 ಅಕ್ಟೋಬರ್ 2017, 4:36 IST
ಅಕ್ಷರ ಗಾತ್ರ

ಹೊನ್ನಾಳಿ: ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಮಾಡಬೇಕು ಎನ್ನುವ ಸಂಸದ ಎಂ.ಪಿ.ಸಿದ್ದೇಶ್ವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಟೀಕಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಮೂವರು ಸಚಿವರಿದ್ದರು. ಆದರೆ, ಕಾಂಗ್ರೆಸ್ ಚುನಾವಣೆಯಲ್ಲಿ ಬಿಜೆಪಿ ಯನ್ನು ಧೂಳೀಪಟ ಮಾಡಿತು. ಇದೇ ರೀತಿ ಮುಂದಿನ ಚುನಾವಣೆಯಲ್ಲಿ ಎಂಟೂ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಡಿ.ಜಿ.ಶಾಂತನಗೌಡ, ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಗದ್ದಿಗೇಶ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಧುಗೌಡ, ಉಪಾಧ್ಯಕ್ಷ ರಂಜಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT