ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೀಸಲಾತಿ ಕಲ್ಪಿಸಿದರೆ ಸಮಾಜ ಅಭಿವೃದ್ಧಿ’

Last Updated 26 ಅಕ್ಟೋಬರ್ 2017, 5:48 IST
ಅಕ್ಷರ ಗಾತ್ರ

ಹೊಸಪೇಟೆ: 'ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿರುವ ವಾಲ್ಮೀಕಿ ನಾಯಕ ಸಮುದಾಯಕ್ಕೆ ರಾಜ್ಯ ಸರ್ಕಾರ ಶೇ 7.5 ರಷ್ಟು ಮೀಸಲಾತಿ ಕಲ್ಪಿಸಿದರೆ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ' ಎಂದು ಸಂಸದ ಬಿ.ಶ್ರೀರಾಮುಲು ಹೇಳಿದರು.

ತಾಲ್ಲೂಕಿನ ಕಮಲಾಪುರದಲ್ಲಿ ಬುಧವಾರ ನಡೆದ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ  ಮಾತನಾಡಿದರು.

'ರಾಜ್ಯದಲ್ಲಿಯೇ ನಾಯಕ ಸಮಾಜ ಜನಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ಸಂಘಟಿತರಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ' ಎಂದರು.

‘ಶೇ 7.5 ಮೀಸಲಾತಿ ನೀಡುವಂತೆ ನ್ಯಾಯಾಲಯ ಸೂಚಿಸಿದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯೆ ವಹಿಸಿದೆ’ ಎಂದರು.

ಶಾಸಕ ಆನಂದಸಿಂಗ್, ಬಿಜೆಪಿ ಮುಖಂಡ ರಾಜುಗೌಡ, ಎನ್.ಓಬಯ್ಯ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಜಿ.ಹನುಮಂತ, ಬಿ.ಕಿರಣಕುಮಾರ್, ಗೋಪಣ್ಣ, ಲಕ್ಷ್ಮಿದೇವಿ ಜಿಗಳಿ ಸಮಾಜದ ಮುಖಂಡರಾದ ರಾಜಶೇಖರ, ಕನಕಗಿರಿ ಉಪನ್ಯಾಸಕ ಎಂ.ಕೆ.ದುರುಗಪ್ಪ, ಜಂಬಯ್ಯನಾಯಕ, ಎಂ.ಜಿ.ಜೋಗಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT