ಉದ್ಯೋಗ ಸೃಷ್ಟಿ; ಭರವಸೆ ಈಡೇರಿಸದ ಬಿಜೆಪಿ- – ಟೀಕೆ

ಮಂಗಳವಾರ, ಜೂನ್ 25, 2019
24 °C

ಉದ್ಯೋಗ ಸೃಷ್ಟಿ; ಭರವಸೆ ಈಡೇರಿಸದ ಬಿಜೆಪಿ- – ಟೀಕೆ

Published:
Updated:
ಉದ್ಯೋಗ ಸೃಷ್ಟಿ; ಭರವಸೆ ಈಡೇರಿಸದ ಬಿಜೆಪಿ- – ಟೀಕೆ

ಚಿಕ್ಕಮಗಳೂರು: ಚುನಾವಣೆ ವೇಳೆ ನೀಡಿದ್ದ ಆಶ್ವಾಸನೆಯಂತೆ, ಉದ್ಯೋಗ ಸೃಷ್ಟಿಸಲು ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್‌ವೃತ್ತದ ಸಮೀಪದ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ, ‘ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಬಿಜೆಪಿ ಭರವಸೆ ನೀಡಿತ್ತು. ಕೇಂದ್ರದಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ಮೂರು ವರ್ಷಗಳಾಗಿವೆ. ಮೂರು ವರ್ಷಕ್ಕೆ ಆರು ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಈವರೆಗೆ ಶೇ 10ರಷ್ಟು ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ದೂರಿದರು.

‘ಜಿಎಸ್‌ಟಿ ತೆರಿಗೆ ಜಾರಿಗೊಳಿಸಿ ಜನಸಾಮಾನ್ಯರಿಗೆ ತೊಂದರೆ ಮಾಡಿದೆ. ಪ್ರಧಾನಿ ಮೋದಿ ವಿದೇಶ ಪ್ರಯಾಣಕ್ಕಾಗಿ ಜನರ ತೆರಿಗೆ ಹಣ ವ್ಯಯವಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಕೋಮುವಾದ ಹೆಚ್ಚಾಗುತ್ತಿದೆ’ ಎಂದು ಆಪಾದಿಸಿದರು.

ಯುವ ಕಾಂಗ್ರೆಸ್ ಮುಖಂಡ ರಾಹೀಲ್ ಷರೀಫ್ ಮಾತನಾಡಿ, ‘ಗರಿಷ್ಠ ಮುಖಬೆಲೆಯ ನೋಟು ರದ್ಧತಿ, ಜಿಎಸ್‌ಟಿ ತೆರಿಗೆಯಂತಹ ನೀತಿಯಿಂದ ಮಧ್ಯಮ ವರ್ಗದ ಜನರು ಕಂಗಾಲಾಗಿದ್ದಾರೆ. ದೇಶದ ಆರ್ಥಿಕ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್, ಜೆ.ವಿನಾಯಕ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry