ನಾನೂ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿ

ಬುಧವಾರ, ಜೂನ್ 26, 2019
29 °C
ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ

ನಾನೂ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿ

Published:
Updated:

ಚಿತ್ರದುರ್ಗ: ‘ಮುಂದಿನ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಆಕಾಂಕ್ಷಿಗಳಲ್ಲಿ ನಾನು ಕೂಡ ಒಬ್ಬ’ ಎಂದು ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ತಿಳಿಸಿದರು.

‘ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ. ಒಂದು ವೇಳೆ ನೀಡದಿದ್ದರೂ ಕಾಂಗ್ರೆಸ್‌ನಲ್ಲಿಯೇ ಇದ್ದು, ಹೈಕಮಾಂಡ್ ಸೂಚಿಸಿದ ವ್ಯಕ್ತಿ ಪರವಾಗಿ ಕೆಲಸ ಮಾಡುತ್ತೇನೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಜಯಗಳಿಸಿದರೆ, ಅದು 2019ರ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನ ಗಳಿಸಲು ದಿಕ್ಸೂಚಿ ಆಗಲಿದೆ ಎಂದು ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಫಾತ್ಯರಾಜನ್, ಒಡಂಬಡಿಕೆಯಂತೆ ತಲಾ 15 ತಿಂಗಳ ಅಧಿಕಾರ ಹಂಚಿಕೆ ಮಾಡಲಾಗಿತ್ತು. ಆದರೆ, ಈಗಿನ ಅಧ್ಯಕ್ಷರು ಇನ್ನೂ ನಾಲ್ಕು ತಿಂಗಳು ನನ್ನನ್ನು ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಅವರು ರಾಜೀನಾಮೆ ನೀಡದಿದ್ದರೆ, ಪಕ್ಷದಿಂದ ಉಚ್ಚಾಟಿಸುವ ಬಗ್ಗೆ ಕೆಪಿಸಿಸಿ ಮಟ್ಟದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರಾದ ಬಿ.ಜಿ.ಶ್ರೀನಿವಾಸ್, ಮಹಡಿ ಶಿವಮೂರ್ತಿ, ಬಾಬುರೆಡ್ಡಿ, ಜಾಹ್ನವಿ ನಾಗರಾಜ್, ಅಲ್ಲಾಭಕ್ಷ್, ಸೈಯದ್ ವಲಿಖಾದ್ರಿ, ಡಿವಿಟಿ ಕರಿಯಪ್ಪ,

ಪ್ರಕಾಶ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry