ಜೆಡಿಎಸ್‌ ಬೂತ್‌ ಮಟ್ಟದ ಸಮಿತಿ ರಚನೆಗೆ ಸೂಚನೆ

ಬುಧವಾರ, ಜೂನ್ 26, 2019
29 °C
ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಸಂಚಾಲಕರಾಗಿ ಬಸವರಾಜ ಭಜಂತ್ರಿ ನೇಮಕ

ಜೆಡಿಎಸ್‌ ಬೂತ್‌ ಮಟ್ಟದ ಸಮಿತಿ ರಚನೆಗೆ ಸೂಚನೆ

Published:
Updated:

ಧಾರವಾಡ: ಈಗಾಗಲೇ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಸಮಿತಿಗಳನ್ನು ರಚಿಸಲಾಗಿದ್ದು, ಬೂತ್‌ ಸಮಿತಿಗಳನ್ನು ಶೀಘ್ರದಲ್ಲೇ ರಚಿಸಬೇಕು’ ಎಂದು ಜೆಡಿಎಸ್‌ ಜಿಲ್ಲಾ ಉಸ್ತುವಾರಿ ಮರಿಲಿಂಗೇಗೌಡ ಪಕ್ಷದ ಮುಖಂಡರಿಗೆ ಹೇಳಿದರು.

ನಗರದಲ್ಲಿ ಬುಧವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ವಾರ್ಡ್‌ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಪಕ್ಷ ಸಂಘಟನೆ ಅವಶ್ಯಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದರು.

‘ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರನ್ನು ಗುರುತಿಸಿ ಟಿಕೆಟ್ ನೀಡಲು ಉದ್ದೇಶಿಸಲಾಗಿದೆ. ಹೊರಗಿನವರಿಗೆ ಅವಕಾಶವಿಲ್ಲ. ಅಭ್ಯರ್ಥಿಗಳು ಯಾರೇ ಆದರೂ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಬೇಕು. ಜೆಡಿಎಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಕರಿಸಬೇಕು’ ಎಂದರು.

‘ಗ್ರಾಮೀಣ ಭಾಗದಲ್ಲಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಾರ್ಯಕರ್ತರು ಹಳ್ಳಿಹಳ್ಳಿಗೂ ತೆರಳಿ ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿ ವಹಿಸಬೇಕು. ಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ರೈತರು ಮತ್ತು ಬಡವರ ಪರ ಕೆಲಸ ಮಾಡಲಿದ್ದಾರೆ’ ಎಂದು ಮರಿಲಿಂಗೇ ಗೌಡ ಹೇಳಿದರು.

ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸೀಮರದ ಮಾತನಾಡಿ, ‘ಪಕ್ಷದ ಬಗ್ಗೆ ಇಂದಿಗೂ ನಾಗರಿಕರಲ್ಲಿ ವಿಶ್ವಾಸವಿದೆ. ಆದರೆ ಪಕ್ಷ ಸಂಘಟನೆಯಲ್ಲಿ ಹಿಂದೆ ಬಿದ್ದಿದ್ದರಿಂದಾಗಿ ಈವರೆಗೂ ಕೆಲವು ತೊಂದರೆಗಳಾದವು. ಆದರೆ ಮುಂದೆ ಹೀಗಾಗಬಾರದು. ಅದಕ್ಕೆ ಎಲ್ಲ ಕಾರ್ಯಕರ್ತರು ಸೇರಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು’ ಎಂದರು.

‘ಬಸವರಾಜ ಭಜಂತ್ರಿ ಅವರನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಅವರೊಂದಿಗೆ 20 ಜನರ ತಂಡವನ್ನು ರಚಿಸಲಾಗಿದೆ. ಇವರೆಲ್ಲರೂ ನಿತ್ಯ ಕ್ಷೇತ್ರದ ಒಂದೊಂದು ವಾರ್ಡ್‌ಗಳಿಗೆ ಭೇಟಿ ನೀಡಿ ಪಕ್ಷ ಹಾಗೂ ಹಿಂದೆ ಜೆಡಿಎಸ್‌ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿದ ಕೆಲಸ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸೂಚಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ, ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ, ರಾಜು ಅಂಬೋರೆ, ಶ್ರೀಕಾಂತ ಜಮನಾಳ, ಅಲ್ತಾಫ್ ಕಿತ್ತೂರ, ಮುಜಾಹಿದ ಕಾಂಟ್ರ್ಯಾಕ್ಟರ್, ಎಂ.ಎಫ್. ಹಿರೇಮಠ, ಬಸವರಾಜ ಭಜಂತ್ರಿ, ಶಾಂತವೀರ ಬೆಟಗೇರಿ, ದೇವರಾಜ ಕಂಬಳಿ, ಸುರೇಶ ಹಿರೇಮಠ, ಜಲಾನಿ ಖಾಜಿ, ಮುದಕಪ್ಪ ಮಲ್ಹಾರಿ, ನವೀನ ಮುನಿಯಪ್ಪನವರ, ವೆಂಕಟೇಶ ಸಗಬಾಲ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry