ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಕೆಜೋಳ ಖರೀದಿಗೆ ದೇವೇಗೌಡ ಆಗ್ರಹ

Last Updated 26 ಅಕ್ಟೋಬರ್ 2017, 8:49 IST
ಅಕ್ಷರ ಗಾತ್ರ

ಹಾಸನ: ಬೆಲೆ ಕುಸಿತ ಹಾಗೂ ಕೀಟ ಬಾಧೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವ ಮೂಲಕ ಪಶು ಆಹಾರ ತಯಾರಿಕೆಗೆ ಮೆಕ್ಕೆಜೋಳ ಖರೀದಿಸಲು ಕೆಎಂಎಫ್‌ಗೆ ನಿರ್ದೇಶನ ನೀಡಬೇಕು ಎಂದು ಸಂಸದ ಎಚ್.ಡಿ.ದೇವೇಗೌಡ ಸುದ್ದಿಗೋಷ್ಠಿಯಲ್ಲಿ ಬುಧವಾರ ಒತ್ತಾಯಿಸಿದರು.

ಏಳು ಜಿಲ್ಲೆಗಳಲ್ಲಿ 2.50 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿರುವ ಜೋಳಕ್ಕೆ ಕೀಟಬಾಧೆ ತಗುಲಿದೆ. ಕ್ವಿಂಟಲ್‌ಗೆ ₹ 1800 ಬೆಂಬಲ ಬೆಲೆ ನಿಗದಿ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಪರಸ್ಪರ ಆರೋಪ ಬಿಟ್ಟು ಎಕರೆಗೆ ಇಂತಿಷ್ಟು ಪರಿಹಾರ ನೀಡಬೇಕು. ಈ ಸಂಬಂಧ ಖುದ್ದು ಪ್ರಧಾನಿ, ಮುಖ್ಯಮಂತ್ರಿಗೆ ಮನವರಿಕೆ ಮಾಡಲಾಗುವುದು. ಬೆಂಬಲ ಬೆಲೆಯಲ್ಲಿ ಖರೀದಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನವಭಾರತ ನಿರ್ಮಿಸುವುದಾಗಿ ಮೋದಿ ಹೇಳುತ್ತಿದ್ದಾರೆ. ಅದಕ್ಕೂ ಮುನ್ನ ಸಂಕಷ್ಟದಲ್ಲಿರುವ ಅನ್ನದಾತನ ಉಳಿಸುವ ಕೆಲಸ ಮಾಡಲಿ. ರಾಗಿ, ತೆಂಗು, ಅಡಿಕೆ ಸಂಪೂರ್ಣ ನಾಶವಾಗಿದೆ. ಇನ್ನೂ ಪರಿಹಾರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT