ಚಿರತೆ ದಾಳಿ: ಯುವಕನ ತಲೆಗೆ ಗಾಯ

ಬುಧವಾರ, ಜೂನ್ 19, 2019
28 °C

ಚಿರತೆ ದಾಳಿ: ಯುವಕನ ತಲೆಗೆ ಗಾಯ

Published:
Updated:

ಅಂಕೋಲಾ: ತಾಲ್ಲೂಕಿನ ಅಗಸೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಕ್ಕಿಗದ್ದೆಯ ಗ್ರಾಮದಲ್ಲಿ ರಾತ್ರಿ ವೇಳೆ ಮನೆಯೊಳಗೆ ನುಗ್ಗಿದ ಚಿರತೆಯು ಯುವಕನೊಬ್ಬನ ಮೇಲೆ ದಾಳಿ ನಡೆಸಿದ್ದು, ಆತನ ತಲೆಗೆ ಪರಚಿದ ಗಾಯಗಳಾಗಿವೆ.

ಮನೆಯಲ್ಲಿ ಮಲಗಿದ್ದ ಕುಮಾರ ಶಿವು ಗೌಡನ ತಲೆಬುಡದಲ್ಲೇ ಸಾಕು ನಾಯಿಯೂ ಮಲಗಿತ್ತು. ಚಿರತೆಯು ನಾಯಿಯನ್ನು ಹೊತ್ತೊಯ್ಯುವಾಗ ಕುಮಾರ ತಲೆಗೆ ಪರಿಚಿದ ಗಾಯವಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ಆತ ಅಂಕೋಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ.

ಮಾಸ್ತಿಕಟ್ಟಾ ವಲಯ ಅರಣ್ಯಾಧಿಕಾರಿ ವಿ.ಟಿ.ನಾಯ್ಕ, ಉಪ ವಲಯ ಅರಣ್ಯಾಧಿಕಾರಿ ಸಂಜೀವ ನಾಯ್ಕ, ಅರಣ್ಯ ರಕ್ಷಕ ರಾಹುಲ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಅಗಸೂರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಯಶ್ವಂತ ತಿಮ್ಮಾಗೌಡ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry