ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ

ಬುಧವಾರ, ಜೂನ್ 19, 2019
22 °C

ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ

Published:
Updated:
ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ

ರಟ್ಟೀಹಳ್ಳಿ: ‘ಗ್ರಾಮೀಣ ಪ್ರದೇಶದಲ್ಲಿ ಬೂತ್ ಮಟ್ಟದ ಸಭೆಗಳನ್ನು ನಡೆಸಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುವುದೇ ಯುವ ಮೋರ್ಚಾದ ಮೂಲ ಉದ್ದೇಶ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ ನಾಗಣ್ಣನವರ ಹೇಳಿದರು.

ಸಮೀಪದ ಕಡೂರ ಗ್ರಾಮದಲ್ಲಿ ಈಚೆಗೆ ನಡೆದ ‘ಬಿಜೆಪಿ ಯುವ ಮೋರ್ಚಾ ಸಭೆ’ಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿಧರ ಹೊಸಳ್ಳಿ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದ್ದರಿಂದ, ನಮ್ಮ ರಾಜ್ಯದಲ್ಲಿಯೂ ಕೂಡಾ ಮುಂಬರುವ 2018ರ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ’ ಎಂದರು.

ಪಟ್ಟಣ ಪಂಚಾಯ್ತಿ ಸದಸ್ಯ ಮಹೇಂದ್ರ ಬಡಳ್ಳಿ, ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಹನುಮಂತಪ್ಪ ಬಳಿಗಾರ, ಶೇಖಪ್ಪ ತುಮ್ಮಿನಕಟ್ಟಿ, ರಾಮನಗೌಡ ಗಂಟೆಪ್ಪಗೌಡ್ರ, ರುದ್ರಗೌಡ ಸಾಹುಕಾರ, ವೀರಪ್ಪ ಬಿದರಿ, ಸಿದ್ದನಗೌಡ ಮಾಜಿಗೌಡ್ರ, ಪ್ರಭು ನಾಡಗೇರ, ಜಯಪ್ಪ ಸಾಹುಕಾರ, ಸುರೇಶ ದೊಡ್ಡಕ್ಕಳವರ, ಹನುಮಂತಪ್ಪ ಓಲೇಕಾರ ಹಾಗೂ ಸೋಮಶೇಖರ ನಾಡಗೇರ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry