ಮಂಗಳವಾರ, ಸೆಪ್ಟೆಂಬರ್ 17, 2019
24 °C
ತಾಲ್ಲೂಕು ಕಚೇರಿ ಎದುರು ದಲಿತ ಸಿಂಹ ಸೇನೆ ಸದಸ್ಯರ ಧರಣಿ

ಪೋಡಿ ಅದಾಲತ್‌ನಲ್ಲಿ ಲಂಚದ ಹಾವಳಿ: ಆರೋಪ

Published:
Updated:

ಕೋಲಾರ: ಪೋಡಿ ಅದಾಲತ್‌ನಲ್ಲಿ ಲಂಚದ ಹಾವಳಿ ಮೇರೆ ಮೀರಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಿಂಹ ಸೇನೆ ಸದಸ್ಯರು ನಗರದಲ್ಲಿ ಬುಧವಾರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

ತಹಶೀಲ್ದಾರ್ ಮತ್ತು ಸಿಬ್ಬಂದಿ ಪೋಡಿ ಅದಾಲತ್‌ನಲ್ಲಿ ಲಂಚಕ್ಕಾಗಿ ಬಡ ಜನರನ್ನು ಶೋಷಿಸುತ್ತಿದ್ದಾರೆ. ಅಧಿಕಾರಿಗಳು ದಲಿತರು, ಅಲ್ಪಸಂಖ್ಯಾತರು ಹಾಗೂ ರೈತರಿಂದ ಲಂಚದ ರೂಪದಲ್ಲಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ತಾಲ್ಲೂಕಿನ ದೊಡ್ಡಹಸಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದ ಪೋಡಿ ಅದಾಲತ್‌ನಲ್ಲಿ ಲಕ್ಷಾಂತರ ರೂಪಾಯಿ ಲೂಟಿ ಮಾಡಲಾಗಿದೆ. ತಹಶೀಲ್ದಾರ್ ಕೆಳ ಹಂತದ ಸಿಬ್ಬಂದಿ ಮೂಲಕ ಲಂಚದ ದಂಧೆ ನಡೆಸುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸವಲತ್ತುಗಳನ್ನು ಮಾರಾಟ ಮಾಡುವ ಸಂಚು ರೂಪಿಸಿದ್ದಾರೆ. ಇದರಲ್ಲಿ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಸರ್ವೆಯರ್‌ಗಳು ಶಾಮೀಲಾಗಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಂ.ಮುನಿರಾಜು ದೂರಿದರು.

Post Comments (+)