ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌ ಇಲ್ಲದ ಕಾರಣಕ್ಕೆ ಪಡಿತರ ನಿರಾಕರಿಸುವಂತಿಲ್ಲ: ಆಹಾರ ಸಚಿವಾಲಯ

Last Updated 26 ಅಕ್ಟೋಬರ್ 2017, 14:27 IST
ಅಕ್ಷರ ಗಾತ್ರ

ನವದೆಹಲಿ: ಆಧಾರ್‌ ಸಂಖ್ಯೆ ಹೊಂದದೇ ಇರುವುದಕ್ಕೆ ಅಥವಾ ಅದನ್ನು ಪಡಿತರ ಚೀಟಿಯೊಂದಿಗೆ ಜೋಡಣೆ ಮಾಡದೇ ಇರುವ ಕಾರಣಕ್ಕಾಗಿ ಯಾರಿಗೂ ಕೂಡ ಪಡಿತರ ಸೌಲಭ್ಯವನ್ನು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಆಹಾರ ಸಚಿವಾಲಯ ಎಲ್ಲ ರಾಜ್ಯಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಆಧಾರ್‌ ಕಾರ್ಡ್‌ ಇಲ್ಲ ಎಂಬ ಕಾರಣಕ್ಕೆ ಪಡಿತರ ವ್ಯವಸ್ಥೆಯ ಅರ್ಹ ಫಲಾನುಭವಿಗಳ ಪಟ್ಟಿಯಿಂದ ಕುಟುಂಬಗಳ ಹೆಸರುಗಳನ್ನು ತೆಗೆದು ಹಾಕದಂತೆಯೂ ಸಚಿವಾಲಯ ನಿರ್ದೇಶಿಸಿದೆ.

ಆಧಾರ್‌ ಸಂಖ್ಯೆಯನ್ನು ಜೋಡಿಸಿಲ್ಲ ಎಂಬ ಕಾರಣ ನೀಡಿ ಪಡಿತರ ಚೀಟಿ ರದ್ದುಗೊಳಿಸಿದ್ದರಿಂದ ಪಡಿತರ ಆಹಾರ ಸಿಗದೇ ಜಾರ್ಖಂಡ್‌ನಲ್ಲಿ  11 ವರ್ಷದ ಬಾಲಕಿ ಹಸಿವಿನಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾದ ಪ್ರಕರಣ ವರದಿಯಾದ ನಂತರ ಸಚಿವಾಲಯ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸೂಚನೆ ನೀಡಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT