ಪೇಜಾವರ ಶ್ರೀ ಆರೋಗ್ಯದಲ್ಲಿ ಚೇತರಿಕೆ

ಸೋಮವಾರ, ಮೇ 20, 2019
31 °C

ಪೇಜಾವರ ಶ್ರೀ ಆರೋಗ್ಯದಲ್ಲಿ ಚೇತರಿಕೆ

Published:
Updated:
ಪೇಜಾವರ ಶ್ರೀ ಆರೋಗ್ಯದಲ್ಲಿ ಚೇತರಿಕೆ

ಉಡುಪಿ: ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಎದ್ದ ಸ್ವಾಮೀಜಿ ಅವರು, ನಿತ್ಯ ಕರ್ಮ ಮುಗಿಸಿ ದಿನ ಪತ್ರಿಕೆ ಓದಿದರು. ಆ ನಂತರ ಜಪ– ತಪ ಮಾಡಿ ಆಹಾರ ಸೇವಿಸಿದರು. ಎಲ್ಲರೊಂದಿಗೆ ಲವಲವಿಕೆಯಿಂದ ಮಾತನಾಡಿದರು. ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಮಠಕ್ಕೆ ಮರಳಲಿದ್ದಾರೆ ಎಂದು ಹೇಳಿದ್ದಾರೆ.

ಅಗಸ್ಟ್‌ 20ರಂದು ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸ್ವಾಮೀಜಿ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬುಧವಾರ ಅವರನ್ನು ಪರೀಕ್ಷಿಸಿದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಇನ್ನೊಂದು ಚಿಕ್ಕ ಗೆಡ್ಡೆ ಹೊರ ತೆಗೆದಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry