ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮಾರಿಗಳಾದ ಅಧಿಕಾರಿಗಳು: ಹೈಕೋರ್ಟ್‌

Last Updated 26 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಎಲ್ಲ ಇಲಾಖೆಗಳಲ್ಲಿ ಆಡಳಿತ ಯಂತ್ರ ಕುಸಿದಿದ್ದು ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದಾಗಿದೆ’ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಕರಣವೊಂದರಲ್ಲಿ 461 ದಿನ ವಿಳಂಬ ಮಾಡಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಆಕ್ಷೇಪಿಸಿ ಹಣಕಾಸು ಮತ್ತು ವಾಣಿಜ್ಯ ತೆರಿಗೆ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ‘ಸರ್ಕಾರಿ ಅಧಿಕಾರಿಗಳು ಸೋಮಾರಿಗಳಾಗಿದ್ದಾರೆ. ಸಂಬಳ ಪಡೆದು ಕೆಲಸ ಮಾಡದ ಅಸಮರ್ಥರು ಜಾಸ್ತಿ ಆಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಅಧಿಕಾರಿಗಳ ಕಾರ್ಯಶೈಲಿ ಇದೇ ರೀತಿ ಮುಂದುವರಿದರೆ ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆರೋಗ್ಯ ಕಾಪಾಡಿಕೊಳ್ಳಲು ಹೇಳಿ’ ಎಂದು ಸರ್ಕಾರಿ ವಕೀಲರನ್ನು ಎಚ್ಚರಿಸಿದರು.

ನ್ಯಾ. ರಮೇಶ್‌, ಬುಧವಾರ ಹಲವು ಪ್ರಕರಣಗಳಲ್ಲಿ ಸರ್ಕಾರ ಹಾಗೂ ಸರ್ಕಾರಿ ವಕೀಲರ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT