ಸಿಎಂ, ಟಿಪ್ಪುವಿಗೆ ಅವಮಾನ: ದೂರು

ಬುಧವಾರ, ಜೂನ್ 26, 2019
28 °C

ಸಿಎಂ, ಟಿಪ್ಪುವಿಗೆ ಅವಮಾನ: ದೂರು

Published:
Updated:
ಸಿಎಂ, ಟಿಪ್ಪುವಿಗೆ ಅವಮಾನ: ದೂರು

ಕಾರಟಗಿ (ಕೊಪ್ಪಳ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಬಹಿರ್ದೆಸೆಗೆ ಕುಳಿತಂತೆ ಚಿತ್ರವನ್ನು ವಿರೂಪಗೊಳಿಸಿ ಫೇಸ್‌ಬುಕ್‌ಗೆ ಹಾಕಿದ ಹಾಗೂ ಅದನ್ನು ಶೇರ್‌ ಮಾಡಿದವರ ವಿರುದ್ಧ ಕಾರಟಗಿ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ಕಾರ್ಕಳದ ಕುಸುಮಾ ಹರಿಜನ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದರು. ಬೂದಗುಂಪಾ ಗ್ರಾಮದ ಪಂಪನಗೌಡ ಜಂತಗಲ್ ಆ ಚಿತ್ರಗಳನ್ನು ಇತರರಿಗೆ ಶೇರ್‌ ಮಾಡಿದ್ದರು.

‘ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಚಿತ್ರಗಳನ್ನು ವಿರೂಪಗೊಳಿಸಿ ಧಾರ್ಮಿಕ ಭಾವನೆಯನ್ನು ಕೆರಳಿಸುವ ಹಾಗೂ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ, ಮುಸ್ಲಿಮರಿಗೆ ನೋವಾಗಿದೆ. ಆದ್ದರಿಂದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕಾರಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಂಬಣ್ಣ ನಾಯಕ ದೂರು ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry