ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಆರೋಗ್ಯ ತುರ್ತುಪರಿಸ್ಥಿತಿ

Last Updated 26 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ರಾಯಿಟರ್ಸ್‌): ಮಾದಕದ್ರವ್ಯ ಮತ್ತು ಹಾನಿಕಾರಕ ನೋವುನಿವಾರಕಗಳ ಹಾವಳಿ ನಿಯಂತ್ರಿಸುವ ಸಲುವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ಮಾದಕದ್ರವ್ಯ ಮತ್ತು ಹಾನಿಕಾರಕ ನೋವುನಿವಾರಕಗಳಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಕಾರಣ ಟ್ರಂಪ್‌ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕಿತ್ಸೆಗಾಗಿ ನೋವುನಿವಾರಕಗಳು ಮತ್ತು ಮಾದಕದ್ರವ್ಯ ಶಿಫಾರಸು ಮಾಡುವುದನ್ನು ತಡೆಯಲು ಈ ಘೋಷಣೆ ಸಹಾಯಕವಾಗಲಿದೆ ಎಂದು ಅವರು ಹೇಳಿದ್ದಾರೆ.

ಇವುಗಳ ಬಳಕೆಯಿಂದಾಗಿ 2015ರಲ್ಲಿ 33 ಸಾವಿರ ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT