ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಾಜ್‌ ಷರೀಫ್‌ ವಿರುದ್ಧ ವಾರಂಟ್‌ ಜಾರಿ

Last Updated 26 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪನಾಮಾ ಪೇಪರ್ಸ್‌ ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ನ್ಯಾಯಾಲಯಕ್ಕೆ ಹಾಜರಾಗದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕೋರ್ಟ್‌ ವಾರಂಟ್‌ ಜಾರಿ ಮಾಡಿದೆ.

ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕೋರಿ ನವಾಜ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಮೊಹಮದ್‌ ಬಷೀರ್‌ ಅವರು ವಜಾಗೊಳಿಸಿದರು.

ನವಾಜ್‌ ಅವರ ಪತ್ನಿ ಕುಲ್ಸುಮ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಷರೀಫ್‌ ಅವರು ಈ ತಿಂಗಳ ಮೊದಲ ವಾರದಲ್ಲಿ ಲಂಡನ್‌ಗೆ ತೆರಳಿದ್ದಾರೆ. ಇದುವರೆಗೆ ಪಾಕಿಸ್ತಾನಕ್ಕೆ ವಾಪಾಸಾಗಿಲ್ಲ. ಪ್ರಕರಣದ ವಿಚಾರಣೆಯನ್ನು ಕೋರ್ಟ್‌ ನವೆಂಬರ್‌ 3ಕ್ಕೆ ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT